June 5, 2026
IMG-20260605-WA0216.jpg

ಮಲ್ಲೂರಹಳ್ಳಿ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ

ಇಂದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಲ್ಲೂರಹಳ್ಳಿ ಗ್ರಾಮ ಓನ್ ವತಿಯಿಂದ ಗ್ರಾಮದ ಜನರು, ಯುವಕರು ಹಾಗೂ ಮುಖಂಡರ ಸಹಭಾಗಿತ್ವದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಪರಿಸರ ಸಂರಕ್ಷಣೆ ಮತ್ತು ಹಸಿರು ಪರಿಸರ ನಿರ್ಮಾಣದ ಮಹತ್ವವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಗ್ರಾಮದ ವಿವಿಧ ಸ್ಥಳಗಳಲ್ಲಿ ಸಸಿಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಸಸಿಗಳನ್ನು ನೆಟ್ಟು ಅವುಗಳ ಪೋಷಣೆ ಮಾಡುವ ಸಂಕಲ್ಪ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥರು, ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಯುವಕರು, ಮಹಿಳೆಯರು ಹಾಗೂ ಸಾರ್ವಜನಿಕರು ಭಾಗವಹಿಸಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading