June 5, 2026
FB_IMG_1780660461472.jpg

ಚಿತ್ರದುರ್ಗ.ಜೂ.05:
ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ ಆಚರಣೆ ಅಂಗವಾಗಿ ಬರುವ ಜೂನ್ 12ರಂದು ನಗರದಲ್ಲಿ ಬೃಹತ್ ಜಾಗೃತಿ ಜಾಥಾ ಕಾರ್ಯಕ್ರಮ ಆಯೋಜಿಸುವುದಾಗಿ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ ಆಚರಣೆಗೆ ಸಂಬAಧಿಸಿದAತೆ ಜಿಲ್ಲಾಮಟ್ಟದ ಕಾರ್ಯಕಾರಿ ಸಮಿತಿ ಮತ್ತು ಜಿಲ್ಲಾಮಟ್ಟದ ಟಾಸ್ಕ್ಪೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜೂನ್ 12ರಂದು ಅಂದು ಬೆಳಿಗ್ಗೆ 9:30ಕ್ಕೆ ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಮೀಪದ ಒನಕೆ ಓಬವ್ವ ವೃತ್ತದವರೆಗೂ ಬೃಹತ್ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗುವುದು. ಜಾಥಾ ಕಾರ್ಯಕ್ರಮದಲ್ಲಿ ಜಾಗೃತಿ ಫಲಕಗಳು, ಬ್ಯಾನರ್‌ಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು. ಜಿಲ್ಲಾಮಟ್ಟದ ಅಧಿಕಾರಿಗಳು ಸೇರಿದಂತೆ ಸುಮಾರು 400ಕ್ಕೂ ಅಧಿಕ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಳ್ಳುವರು. ನಂತರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲಾಗುವುದು. ಇದೇ ಮಾದರಿಯಲ್ಲಿ ಎಲ್ಲಾ ತಾಲ್ಲೂಕುಗಳಲ್ಲಿಯೂ ಸಹ ತಹಶೀಲ್ದಾರ್ ನೇತೃತ್ವದಲ್ಲಿ ಕಾರ್ಮಿಕರ ನಿರೀಕ್ಷಕರು ಸಹ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ ಆಚರಣೆ ಅಂಗವಾಗಿ ಜಾಗೃತಿ ಜಾಥಾ ನಡೆಸಬೇಕು ಎಂದು ಸೂಚಿಸಿದರು.
ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನದ ಕಾರ್ಯಕ್ರಮಕ್ಕೆ ಎಲ್ಲಾ ಸರ್ಕಾರಿ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಜಿಲ್ಲೆಯ ಮತ್ತು ತಾಲ್ಲೂಕುಗಳ, ಗ್ರಾಮ ಮಟ್ಟದ ಎಲ್ಲಾ ಸರ್ಕಾರಿ ಇಲಾಖೆಗಳು, ಕಚೇರಿಗಳು ಮತ್ತು ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳವುದಿಲ್ಲವೆಂಬ “ಪ್ರಮಾಣ ವಚನ” ಸ್ವೀಕರಿಸಬೇಕು. ಪ್ರತಿಜ್ಞಾ ವಿಧಿ ಸ್ವೀಕರಿಸಿದ ನಂತರ, ಇಲಾಖಾವಾರು ಕಾರ್ಯಕ್ರಮದ ಛಾಯಾಚಿತ್ರಗಳನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ನೀಡುವ ವಾಟ್ಸಾಪ್ ಸಂಖ್ಯೆಗೆ ಕಡ್ಡಾಯವಾಗಿ ಕಳುಹಿಸಬೇಕು ಎಂದರು.
ಶಾಲಾ ಮಕ್ಕಳಿಗೆ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ:
ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆಗಳನ್ನು ಆಯೋಜಿಸಬೇಕು. ವಿಜೇತರಾದ ವಿದ್ಯಾರ್ಥಿಗಳಿಗೆ ವೇದಿಕೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು. ಇದರೊಂದಿಗೆ ಬಾಲ ಕಾರ್ಮಿಕರ ಪತ್ತೆಯಲ್ಲಿ ಗಣನೀಯ ಸಾಧನೆ ತೋರಿದ ಕಾರ್ಮಿಕ ಇಲಾಖೆ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಗೌರವಿಸಲಾಗುವುದು. ಪುರ್ನವಸತಿ ಬಳಿಕ ಎಸ್.ಎಸ್.ಎಲ್.ಸಿಯಲ್ಲಿ ಉತ್ತಮ ಅಂಕಗಳಿಸಿ ವಿದ್ಯಾರ್ಥಿಗಳಿಗೆ ರೂ.2000 ಪ್ರೋತ್ಸಾಹಧನ ನೀಡಲಾಗುವುದು ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಹೇಳಿದರು.
ಜೂನ್ 13 ರಿಂದ 30 ರವರೆಗೆ ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆಯ ಕಾರ್ಮಿಕರನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಸಲಾಗುವುದು. ಈ ಸಂಬAದ ತಾಲ್ಲೂಕು ಹಾಗೂ ಗ್ರಾಮಗಳಲ್ಲಿ ಸಮಿತಿಗಳನ್ನು ರಚಿಸಲಾಗಿದೆ ಎಂದು ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಾಟೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಕಾಶಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ರೇಖಾ, ಹೊಳಲ್ಕೆರೆ ತಹಶೀಲ್ದಾರ್ ವಿಜಯಕುಮಾರ್, ಕಾರ್ಮಿಕ ನಿರೀಕ್ಷಕರುಗಳಾದ ರಾಜಣ್ಣ, ಭೀಮೇಶ್, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆ ಪ್ರತಿನಿಧಿಗಳು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading