
ವರದಿ:: ಕೆ.ಟಿ. ಓಬಳೇಶ್ ನಲಗೇತನಹಟ್ಟಿ.
ನಾಯಕನಹಟ್ಟಿ:: ಈ ಭಾಗದ ರೈತರಿಗೆ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಆಶೀರ್ವಾದದಿಂದ ಉತ್ತಮ ಮಳೆ ಬೆಳೆಯಾಗಲಿ ಎಂದು ಬಿಜೆಪಿ ಮುಖಂಡ ಪಾಪೇಶ್ ನಾಯಕ ಹೇಳಿದರು.







ಮಂಗಳವಾರ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯದ ಒಳಮಠಕ್ಕೆ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜೊತೆ ಭೇಟಿ ನೀಡಿ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಗುರು ತಿಪ್ಪೇರುದ್ರಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಅತ್ಯಂತ ಕಡಿಮೆ ಮಳೆ ಬೀಳುವ ಪ್ರದೇಶವೆಂದರೆ ಅದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿ ಶ್ರಾವಣ ಮಾಸದ ಪ್ರಯುಕ್ತ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಆಶೀರ್ವಾದದಿಂದ ಈ ಭಾಗದ ರೈತರಿಗೆ ಜಾನುವಾರುಗಳಿಗೆ ಉತ್ತಮ ಮಳೆ ಬೆಳೆಯಾಗಿ ಸಮೃದ್ಧಿ ಅರಸಲಿ ಎಂದು ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡ ಡಿ ಎಚ್ ಪರಮೇಶ್ವರಪ್ಪ ಓಬಯ್ಯನಹಟ್ಟಿ, ಮಂಡಲ ಕಾರ್ಯದರ್ಶಿ ಎಚ್ ವಿ ಪ್ರಕಾಶ್, ಪಟ್ಟಣ ಪಂಚಾಯತಿ ಸದಸ್ಯ ಎನ್ ಮಹಾಂತಣ್ಣ, ಗುತ್ತಿಗೆದಾರ ಮಲ್ಲೂರಹಳ್ಳಿ ಮಲ್ಲಯ್ಯ, ನಗರ ಘಟಕ ಕಾರ್ಯದರ್ಶಿ ರಾಜು. ಗುಂತಕೋಲ್ಮನಹಳ್ಳಿ ವಿಷ್ಣು ವಿಕ್ರಮ್, ಸೇರಿದಂತೆ ಬಿಜೆಪಿ ಕಾರ್ಯಕರ್ತರು ಅಭಿಮಾನಿಗಳು ಉಪಸ್ಥಿತರಿದ್ದರು
About The Author
Discover more from JANADHWANI NEWS
Subscribe to get the latest posts sent to your email.