September 14, 2025
1754401197992.jpg



ಚಿತ್ರದುರ್ಗ  ಆಗಸ್ಟ್ 05:
ಜಿಲ್ಲಾ ಕೇಂದ್ರದಲ್ಲಿ ಸರ್ಕಾರದ ವತಿಯಿಂದ ಆಗಸ್ಟ್ 09 ರಂದು ಶ್ರೀ ನುಲಿಯ ಚಂದಯ್ಯ ಜಯಂತಿ ಹಾಗೂ ಆಗಸ್ಟ್ 16 ರಂದು ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶ್ರೀ ನುಲಿಯ ಚಂದಯ್ಯ ಜಯಂತಿ ಹಾಗೂ ಶ್ರೀಕೃಷ್ಣ ಜಯಂತಿಯನ್ನು ಜಿಲ್ಲಾ ಕೇಂದ್ರದಲ್ಲಿ ಆಚರಿಸುವ ಸಂಬಂಧ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಆಗಸ್ಟ್ 09 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಚರಿಸಲು ಸಮಾಜದ ಮುಖಂಡರು ಸಲಹೆ ನೀಡಿದರು. ಇದಕ್ಕೆ ಸಮ್ಮಿತಿ ವ್ಯಕ್ತಪಡಿಸಿದ ಉಪವಿಭಾಗಾಧಿಕಾರಿಗಳು, ಸರ್ಕಾರದ ಶಿಷ್ಟಾಚಾರ ಪಾಲಿಸಿಕೊಂಡು ಅರ್ಥಪೂರ್ಣವಾಗಿ ಜಯಂತಿ ಆಚರಿಸಲಾಗುವುದು ಎಂದು ಹೇಳಿದರು.
ಸಮಾಜದ ವತಿಯಿಂದ ಇದೇ ಆಗಸ್ಟ್ 22 ರಂದು ರಾಜ್ಯ ಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಜಿಲ್ಲಾಡಳಿತದ ವತಿಯಿಂದ ಆಚರಿಸುವ ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮವನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸಮಾಜದ ಮುಖಂಡರು ಒಪ್ಪಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಕೊರಮ ಸಮುದಾಯದ ಜಿಲ್ಲಾ ಅಧ್ಯಕ್ಷ ಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ದ್ವಾರಕನಾಥ್, ಉಪಾಧ್ಯಕ್ಷ ರಾಮಣ್ಣ, ಮುಖಂಡರಾದ ಪರಮೇಶ್, ಅಂಜಿನಮೂರ್ತಿ, ಪುಷ್ಪರಾಜ್, ಮೂರ್ತಿ, ನಾಗರಾಜ್, ಮುನಿರಾಜ್, ವೆಂಕಟೇಶ್ ಇದ್ದರು.
ಆಗಸ್ಟ್ 16 ರಂದು ಅದ್ಧೂರಿ ಶ್ರೀ ಕೃಷ್ಣ ಜಯಂತಿ ಆಚರಣೆ:
* ಶ್ರೀ ಕೃಷ್ಣ ಜಯಂತಿಯನ್ನು ಆಗಸ್ಟ್ 16 ರಂದು ಬೆಳಿಗ್ಗೆ 11ಕ್ಕೆ ನಗರದ ಹೊಳಲ್ಕೆರೆ ರಸ್ತೆಯ ಶ್ರೀ ಕೃಷ್ಣ ವೃತ್ತದಲ್ಲಿ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು.
ಶ್ರೀ ಕೃಷ್ಣ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಶ್ರೀ ಕೃಷ್ಣರ ಕುರಿತು ಉಪನ್ಯಾಸ, ಸಂಗೀತ ಕಾರ್ಯಕ್ರಮ, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ, ವಿತರಣೆಗೆ ಕ್ರಮವಹಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ತಿಳಿಸಿದರು.
ಶ್ರೀ ಕೃಷ್ಣ ಜಯಂತಿ ಅಂಗವಾಗಿ ಆಗಸ್ಟ್ 15ರಂದು ಬೆಳಿಗ್ಗೆ 11ಕ್ಕೆ ಸಮಾಜದ ವತಿಯಿಂದ ಬೈಕ್ ರ್ಯಾಲಿ, ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗುವುದು ಎಂದು ಸಮಾಜದ ಮುಖಂಡರು ಸಭೆಯಲ್ಲಿ ತಿಳಿಸಿದರು.
ಸಭೆಯಲ್ಲಿ ಮಾಜಿ ಶಾಸಕ ಎ.ವಿ. ಉಮಾಪತಿ, ನಗರಸಭೆ ಮಾಜಿ ಅಧ್ಯಕ್ಷ ಸಿ.ಕೆ. ಕೃಷ್ಣಮೂರ್ತಿ, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ನಿವೃತ್ತ ಎಸಿಪಿ ಅಜ್ಜಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಜಗದೀಶ್, ಎಪಿಎಂಸಿ ಮಾಜಿ ಸದಸ್ಯ ತಿಪ್ಪೇಸ್ವಾಮಿ, ಮುಖಂಡರಾದ ಬಸಣ್ಣ, ಗರಡಿ ತಿಮ್ಮಣ್ಣ, ಸಾಹಿತಿ ಆನಂದ್, ಕಲಾವಿದ ಮಾರುತಿ, ನಾಗರಾಜ್, ಸಿದ್ದಪ್ಪ, ಕದುರಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading