ಚಿತ್ರದುರ್ಗ ನ.04:
ಮುಖ್ಯಮಂತ್ರಿ ಸಿದ್ದರಾಮಯ್ಯನವರು ನ. 07 ರಂದು ಚಿತ್ರದುರ್ಗ ಜಿಲ್ಲೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮುಖ್ಯಮಂತ್ರಿಗಳು ಅಂದು ಸಂಜೆ 3.55 ಗಂಟೆಗೆ ತುಮಕೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು, ಸಂಜೆ 4.30 ಗಂಟೆಗೆ ಹೊಸದುರ್ಗ ತಾಲ್ಲೂಕು ನೀರಗುಂದ ಗೇಟ್ ಬಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಆವರಣದಲ್ಲಿನ ಹೆಲಿಪ್ಯಾಡ್‍ಗೆ ಆಗಮಿಸುವರು. ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಂಜೆ 6 ಗಂಟೆಗೆ ತರಳಬಾಳು ಜಗದ್ಗುರು ಬೃಹನ್ಮಠ ಸಿರಿಗೆರೆ, ಶ್ರೀ ಶಿವಕುಮಾರ ಕಲಾ ಸಂಘ ಸಾಣೆಹಳ್ಳಿ ಇವರ ವತಿಯಿಂದ ಆಯೋಜಿಸಿರುವ ಶಿವಕುಮಾರ ಪ್ರಶಸ್ತಿ ಪ್ರದಾನ ಮತ್ತು ರಾಷ್ಟ್ರೀಯ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು. ಮುಖ್ಯಮಂತ್ರಿಗಳು ರಾತ್ರಿ 8 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.