ಚಿತ್ರದುರ್ಗನ.05:
ಪ್ರತಿ ಮಗುವೂ ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯ ಕುಮಾರ್ ಹೇಳಿದರು.
ನಗರದ ಜಿಲ್ಲಾ ಬಾಲಭವನದ ಸಭಾಂಗಣದಲ್ಲಿ ಬುಧವಾರ ಅಂಗನವಾಡಿ ಕಾರ್ಯಕರ್ತೆಯರಿಗೆ ದತ್ತು ಮಾರ್ಗಸೂಚಿ 2022, ಬಾಲ್ಯವಿವಾಹ, ಪೋಕ್ಸೋ ಕಾಯ್ದೆ ಹಾಗೂ ಇಲಾಖೆಯ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವು ಕಲ್ಪಿಸುತ್ತದೆ. ಈ ನಿಟ್ಟಿನಲ್ಲಿ ದತ್ತು ಪ್ರಕ್ರಿಯೆಯು ಅನಾಥ, ಪರಿತ್ಯಕ್ತ ಹಾಗೂ ಒಪ್ಪಿಸಲ್ಪಟ್ಟ ಮಕ್ಕಳ ಪುನರ್ವಸತಿಗೆ ನೆರವಾಗುವುದು ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಯ ಉದ್ದೇಶವಾಗಿರುತ್ತದೆ ಎಂದು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರೇಮಕುಮಾರ್ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವು ಸಹ 2025ನೇ ವರ್ಷದ ನವೆಂಬರ್ ತಿಂಗಳನ್ನು ಅಂತರಾಷ್ಟ್ರೀಯ ದತ್ತು ಮಾಸಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಪೋಷಕತ್ವ ಯೋಜನೆ, ಕಾನೂನು ಬದ್ಧದತ್ತು ಹಾಗೂ ಹಾಗೂ ಕಾನೂನು ಬಾಹಿರ ದತ್ತು ಪ್ರಕ್ರಿಯೆ ಅಪರಾಧ ಮಕ್ಕಳ ಮಾರಾಟ ಅಪರಾಧ “ಮಕ್ಕಳನ್ನು ಮಾರುವವರಿಗೂ ಹಾಗೂ ಕೊಳ್ಳುವವರಿಗೂ ಬಾಲ ನ್ಯಾಯಕಾಯ್ದೆ 2015 ಸೆಕ್ಷನ್ 80, 81ರ ಅನ್ವಯ 5 ವರ್ಷಗಳವರೆಗೂ ಸೆರೆಮನೆ ವಾಸದೊಂದಿಗೆ 1 ಲಕ್ಷ ರೂ.ಗಳ ದಂಡ ವಿಧಿಸಬಹುದು. ಈ ಅಪರಾಧದಲ್ಲಿ ಆಸ್ಪತ್ರೆಯವರು ಶಾಮಿಲಾಗಿದ್ದರೆ ಶಿಕ್ಷೆಯ ಅವಧಿ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ 7 ವರ್ಷಗಳವರೆಗೆ ವಿಸ್ತರಣೆ” ಅಂಗನವಾಡಿ ಕಾರ್ಯಕರ್ತೆಯರಿಗೆ ತಮ್ಮ ವ್ಯಾಪ್ತಿಯಲ್ಲಿ ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿ ಕಂಡು ಬಂದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಘಟಕ ಅಥವಾ ಮಕ್ಕಳ ಸಹಾಯವಾಣಿ 1098ಕ್ಕೆ ಮಾಹಿತಿ ನೀಡಲು ತಿಳಿಸಿದರು.
ಇದೇ ಸಂದರ್ಭದಲ್ಲಿ “ಮಕ್ಕಳ ಮಾರಾಟ ಶಿಕ್ಷಾರ್ಹ ಅಪರಾಧ” ಪೋಸ್ಟರ್‍ಗಳನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ನಿರೂಪಣಾಧಿಕಾರಿ ಡಿ.ಮಂಜುನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಗಂಗಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.