January 30, 2026
IMG-20250106-WA0304.jpg

ಚಳ್ಳಕೆರೆ ಜ.6

ಚಳ್ಳಕೆರೆ ತಾಲೂಕಿನ ಕಸಬಾ ವಲಯದ ಕುವೆಂಪು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮುಖಾಂತರ ಉದ್ಘಾಟನೆ ಮಾಡಲಾಯಿತು ಪ್ರಾಸ್ತಾವಿಕ ಮಾತುಗಳನಾಡಿದ ಸಂತೋಷ್ ಅವರು ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಹಾಗೂ ಅವುಗಳನ್ನು ರೂಢಿಸಿಕೊಳ್ಳುವುದರಿಂದ ಆಗುವ ಪ್ರಯೋಜನಗಳ ಕುರಿತು ಹಾಗೂ ಕೆಟ್ಟ ಹವ್ಯಾಸಗಳಿಂದ ಆಗುವ ದುಷ್ಪರಿಣಾಮಗಳ ಕುರಿತು ಈ ಕಾರ್ಯಕ್ರಮದ ಉದ್ದೇಶ ಇದರ ಪ್ರಯೋಜನದ ಕುರಿತು ಮಾಹಿತಿ ನೀಡಿದರು
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶ್ರೀಮತಿ ಮಧುಮಾಲತಿ ಇವರು ಮಕ್ಕಳು ಕುಟುಂಬದ ಕಣ್ಣುಗಳಾಗಿದ್ದು ಪೋಷಕರ ಅಭಿಲಾಷೆಯಂತೆ ಅವರು ವಿದ್ಯಾಭ್ಯಾಸದಲ್ಲಿ ತೊಡಗಿ ಪ್ರಗತಿ ಸಾಧಿಸಬೇಕು ವಿದ್ಯಾರ್ಥಿಗಳು ತಮ್ಮ ಆರೋಗ್ಯ ಪಾಲನೆಗೆ ಹಲವು ಮೂಲ ತಿಳುವಳಿಕೆಗಳನ್ನು ಗಳಿಸುವ ಅಗತ್ಯತೆ ವಿದೆ ಮಧ್ಯವಸನ ಗುಟ್ಕಾ ಧೂಮಪಾನಗಳಿಂದ ಯುವ ಜನತೆಯ ಜೀವನ ಹಾಳಾಗುತ್ತಿದೆ ಸಹವಾಸ ದೋಷ ಆಕಸ್ಮಿಕ ಆಕರ್ಷಣೆಗಳ ಕಾರಣ ದುಶ್ಚಟಗಳು ಒಮ್ಮೆ ಆರಂಭವಾದರೆ ಬದುಕು ವಿನಾಶದ ಹಾದಿಯಲ್ಲಿ ಸಾಗುತ್ತದೆ ಇದರಿಂದ ವೈಯಕ್ತಿಕ ಜೀವನದ ಜೊತೆ ಸಮಾಜದ ಸ್ವಾಸ್ಥ್ಯ ಸಹ ಹಾಳಾಗುತ್ತದೆ ವಿದ್ಯಾರ್ಥಿ ಜೀವನದ ದೆಸೆಯಿಂದಲೇ ಉತ್ತಮ ಕ್ರಿಯೆ ಶೀಲಾ ಹವ್ಯಾಸಗಳನ್ನು ರೂಡಿಸಿಕೊಂಡು ಉತ್ತಮ ಸಮಾಜ ಕಟ್ಟುವ ಕಾರ್ಯಕ್ರಮಕ್ಕೆ ದೃಢಕ ಸಂಕಲ್ಪ ಕೈಗೊಳ್ಳಬೇಕು ಎಂದು ತಿಳಿಸಿದರು
ಮೃತ್ಯುಂಜಯ ಸರ್ ಸಾಮಾಜಿಕ ದುಶ್ಚಟಗಳನ್ನ ನಿಯಂತ್ರಿಸುವುದರ ಕುರಿತು ಹಾಗೂ ಬಿಡುವುದರ ಕುರಿತು ಅವರ ಜಾಗೃತಿ ಮೂಡಿಸಿದರು
ರಮೇಶ್ ಪ್ರಾಂಶುಪಾಲರು ಐಟಿಐ ಕಾಲೇಜು ಇವರು ಮಾತನಾಡುತ್ತಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಡುವ ಸಮಾಜಮುಖಿ ಕಾರ್ಯಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು
ಈ ಕಾರ್ಯಕ್ರಮದಲ್ಲಿ ಕುವೆಂಪು ಆಂಗ್ಲ ಮಾಧ್ಯಮ ಶಾಲೆಯ ಅಡ್ಮಿನಿಸ್ಟೇಟರ್ ಆದ ತಿಪ್ಪೇಸ್ವಾಮಿ ಸರ್ ,ಶಾಲೆಯ ಮುಖ್ಯ ಉಪಾಧ್ಯಾಯರಾದ ತಿಪ್ಪೇಸ್ವಾಮಿ ಶಾಲಾ ಶಿಕ್ಷಕ ವೃಂದದವರು ಭಾಗವಹಿಸಿದ್ದರು.ವಲಯದ ಮೇಲ್ವಿಚಾರಕರಾದ ಸಂತೋಷ್ ಮತ್ತು ಸೇವಾ ಪ್ರತಿನಿಧಿಯಾದ ಬೇಬಿ ಹಾಜರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading