March 18, 2026
IMG-20250206-WA0123.jpg

ವರದಿ: ಕೆ.ಟಿ.ಮೋಹನ್ ಕುಮಾರ್

ಸಾಲಿಗ್ರಾಮ (ಮೈಸೂರು ಜಿಲ್ಲೆ): ತಾಲೂಕಿನ ತಂದ್ರೆಕೊಪ್ಪಲು ಸರ್ಕಾರಿ ಶಾಲೆಗೆ ವಿವಿಧ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕೆಂದು ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಮಂಜುನಾಥ್ ಮನವಿ ಮಾಡಿದ್ದಾರೆ.

ತಂದ್ರೆಕೊಪ್ಪಲು ಗ್ರಾಮದ ಸರ್ಕಾರಿ ಶಾಲೆಯಲ್ಲಿನ ಸಮಸ್ಯೆಗಳ ಬಗ್ಗೆ ಶಾಸಕ ಡಿ.ರವಿಶಂಕರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಗೆ ಕೆಳಗಿನ ಕೊಪ್ಪಲು ಎಂಬ ಗ್ರಾಮದ ಹೆಸರಿದ್ದು ಅದನ್ನು ಬದಲಾಯಿಸಿ ತಂದ್ರೆಕೊಪ್ಪಲು ಎಂಬುದಾಗಿ ಮಾಡಿಸಿಕೊಡಬೇಕು, ಶಾಲೆಯ ಆವರಣದಲ್ಲಿ ಕಾಂಕ್ರೀಟೀಕರಣ ಮಾಡಬೇಕು, ಶೌಚಾಲಯ ಮತ್ತು ಕಾಂಪೌಂಡ್ ನಿರ್ಮಾಣ ಮಾಡಿಕೊಡಬೇಕು ಆ ಮೂಲಕ ವಿದ್ಯಾರ್ಥಿಗಳು ಉತ್ತಮ ವ್ಯಾಸಂಗ ಮಾಡಲು ಅನುಕೂಲವಾಗುವಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂದು ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಮಂಜುನಾಥ್ ಮನವಿ ಮಾಡಿದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading