ಚಿತ್ರದುರ್ಗ ಫೆ.06:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮಹಾತ್ಮ ಗಾಂಧಿ ನರೇಗಾ ಯೋಜನೆ ವತಿಯಿಂದ ಬೆಂಗಳೂರು ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ ನರೇಗಾ ಹಬ್ಬ-2025 ದಲ್ಲಿ ಅತ್ಯುತ್ತಮವಾಗಿ ನರೇಗಾ ಯೋಜನೆ ಅನುಷ್ಠಾನಗೊಳಿಸಿದ ಚಿತ್ರರ್ದು ಜಿಲ್ಲೆಯ “ಸಾಮಾಜಿಕ ಅರಣ್ಯ ಇಲಾಖೆಗೆ ಅತ್ಯುತ್ತಮ ಜಿಲ್ಲಾ ಪ್ರಶಸ್ತಿ” ಲಭಿಸಿದೆ.
ಚಳ್ಳಕೆರೆ ತಾಲ್ಲೂಕು ಬೆಳಗೆರೆ ಗ್ರಾಮ ಪಂಚಾಯಿತಿಗೆ “ಅತ್ಯುತ್ತಮ ಗ್ರಾಮ ಪಂಚಾಯಿತಿ” ಮತ್ತು ಚಿತ್ರದುರ್ಗ ತಾಲ್ಲೂಕಿನ ದ್ಯಾಮವನಹಳ್ಳಿ ಗ್ರಾಮ ಪಂಚಾಯಿತಿಯ ರೇಷ್ಮೆ ಬೆಳೆಗಾರರಾದ ಧನಲಕ್ಷ್ಮಿ ಅವರಿಗೆ “ವಿಶೇಷ ಪ್ರಸಂಶನಾ ಪತ್ರ” ವಿತರಣೆ ಪ್ರಶಸ್ತಿಯನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಎಸ್ ಹೊರಟ್ಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಅವರು ವಿತರಿಸಿದರು.
“ನರೇಗಾ ಹಬ್ಬ-2025″ ಪ್ರಶಸ್ತಿಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಸಾಮಾಜಿಕ ಅರಣ್ಯ ಇಲಾಖೆಯ ಹರೀಶ್.ಕೆ ಮತ್ತು ಇಲಾಖೆಯ ಅಧಿಕಾರಿಗಳು, ಬೆಳಗೆರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ವಿಶಾಲಾಕ್ಷಿ, ಪಿಡಿಒ ದೇವೇಂದ್ರಪ್ಪ, ದ್ಯಾಮವ್ವನಳ್ಳಿ ಗ್ರಾಮ ಪಂಚಾಯತಿಯ ಧನಲಕ್ಷ್ಮಿ ಹಾಗೂ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೆ. ತಿಮ್ಮಪ್ಪ, ಜಿಲ್ಲಾ ಪಂಚಾಯತಿಯ ನರೇಗಾ ಶಾಖೆಯ ಎಡಿಪಿಸಿ ಮೋಹನ್ ಕುಮಾರ್, ಜಿಲ್ಲಾ ಐಇಸಿ ಸಂಯೋಜಕ ಎಂ.ಎಸ್.ರವೀಂದ್ರನಾಥ್, ಜಿಲ್ಲಾ ಎಂಐಎಸ್ ಸಂಯೋಜಕಿ ಡಿ.ಎಂ.ಸಹನಾ ಹಾಗೂ ಲೆಕ್ಕ ವ್ಯವಸ್ಥಾಪಕ ಸಿದ್ದಲಿಂಗ ತೇಜಸ್ವ ಅವರು ಪ್ರಶಸ್ತಿಗಳನ್ನು ಸ್ವೀಕಾರ ಮಾಡಿದರು.



About The Author
Discover more from JANADHWANI NEWS
Subscribe to get the latest posts sent to your email.