ಚಳ್ಳಕೆರೆ | ಜನಧ್ವನಿ ನ್ಯೂಸ್
ಚಳ್ಳಕೆರೆ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮುಂದಿನ ಚುನಾವಣೆಯಾಗುವವರೆಗೂ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಅಧಿಕಾರಾವಧಿಯು ಫೆಬ್ರವರಿ 2026ರಲ್ಲಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಹೊಸದಾಗಿ ಚುನಾವಣೆ ನಡೆಯುವವರೆಗೂ ಅವಧಿ ಮುಗಿದ ಗ್ರಾಮ ಪಂಚಾಯಿತಿಗಳ ದಿನನಿತ್ಯದ ಆಡಳಿತ ಕಾರ್ಯ ನಿರ್ವಹಣೆಗೆ ಈ ಕ್ರಮ ಕೈಗೊಳ್ಳಲಾಗಿದೆ.


ಚಳ್ಳಕೆರೆ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಅಧಿಕಾರಾವಧಿಗಳು ಮುಕ್ತಾಯಗೊಂಡ ದಿನಾಂಕದಿಂದ ಮುಂದಿನ ಆದೇಶ ನೀಡುವವರೆಗೂ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್. ಟಿ., ಭಾ.ಆ.ಸೇ. ಅವರು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 8ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಿಗೆ ಅಧಿಕಾರಿಗಳನ್ನು ಆಡಳಿತಾಧಿಕಾರಿಗಳಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಈ ಆಡಳಿತಾಧಿಕಾರಿಗಳು ಚುನಾವಣೆ ನಡೆಯುವವರೆಗೂ ಗ್ರಾಮ ಪಂಚಾಯಿತಿಗಳ ದೈನಂದಿನ ಆಡಳಿತ, ಸಾರ್ವಜನಿಕ ಸೇವೆ ಹಾಗೂ ಅಭಿವೃದ್ಧಿ ಕಾರ್ಯಗಳ ನಿರ್ವಹಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.
ಜನಧ್ವನಿ ನ್ಯೂಸ್ ಚಳ್ಳಕೆರೆ
About The Author
Discover more from JANADHWANI NEWS
Subscribe to get the latest posts sent to your email.