April 28, 2026
photos-4-1579686436.jpg

ಚಿತ್ರದುರ್ಗಫೆ.6:
ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಇದೇ ಫೆ.9 ಮತ್ತು 10ರಂದು ಚಿತ್ರದುರ್ಗದ ನಗರದ ಪ್ರಧಾನ ಅಂಚೆ ಕಚೇರಿ ಪಕ್ಕದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ವೈಜ್ಞಾನಿಕ ಕೋಳಿ ಸಾಕಾಣಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ.
ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ನೀಡಲಾಗುವುದಿಲ್ಲ. ತರಬೇತಿಗೆ 25 ಜನರ ಗುರಿ ನಿಗಧಿಪಡಿಸಲಾಗಿದ್ದು, ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, ಎರಡು ಪಾಸ್ ಪೋರ್ಟ್ ಸೈಜ್ ಪೋಟೋ, ಬ್ಯಾಂಕ್ ಪಾಸ್ ಬುಕ್ ಪ್ರತಿ ತರುವುದು. ಪರಿಶಿಷ್ಠ ಜಾತಿ ಮತ್ತು ಪರಿಶಷ್ಠ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಗಳೊಂದಿಗೆ ತರಬೇತಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9482943111, 9886002248 ಗೆ ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇದ್ರದ ಮುಖ್ಯ ಪಶು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
==========

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading