May 6, 2026
IMG-20260506-WA0142.jpg

ನಾಯಕನಹಟ್ಟಿ :
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಸಮರ್ಥ್ ಶಾಮನೂರು ಹಾಗೂ ಉಮೇಶ್ ಮೇಟಿ ಅವರಿಗೆ ಕಾಂಗ್ರೆಸ್ ಪಕ್ಷದ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಆರ್. ಶ್ರೀಕಾಂತ್ ಅಭಿನಂದನೆಗಳನ್ನು ಸಲ್ಲಿಸಿದರು.
ಪಟ್ಟಣದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದ ಮೇಲೆ ನಂಬಿಕೆ ಇಟ್ಟು ಮತದಾರರು ತಮ್ಮ ಅಮೂಲ್ಯ ಮತಗಳನ್ನು ನೀಡಿರುವುದರಿಂದ ಈ ಗೆಲುವು ಸಾಧ್ಯವಾಗಿದೆ ಎಂದು ಹೇಳಿದರು. ಮತದಾರರಿಗೆ ಕೃತಜ್ಞತೆಗಳನ್ನು ತಿಳಿಸಿದರು.
ಇನ್ನೂ ಈ ಎರಡೂ ಕ್ಷೇತ್ರಗಳ ಗೆಲುವಿಗೆ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮೊಳಕಾಲ್ಮೂರು ಕ್ಷೇತ್ರದ ಶಾಸಕ ಎನ್.ವೈ. ಗೋಪಾಲಕೃಷ್ಣ ಸೇರಿದಂತೆ ಕಾಂಗ್ರೆಸ್ ಪಕ್ಷದ ಶಾಸಕರು, ಕಾರ್ಯಕರ್ತರು ಹಾಗೂ ಮುಖಂಡರ ಪರಿಶ್ರಮ ಕಾರಣವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.ಈ ಸಂದರ್ಭದಲ್ಲಿ ಎಲ್ಲಾ ನಾಯಕರಿಗೂ ಹಾಗೂ ಕಾರ್ಯಕರ್ತರಿಗೂ ಧನ್ಯವಾದಗಳನ್ನು ಸಲ್ಲಿಸಿದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading