ಮೊಳಕಾಲ್ಮೂರು : ಇದೇ ಮೇ 9 ರಂದು ನಡೆಯಲಿರುವ ಮಾಜಿ ಮುಖ್ಯಮಂತ್ರಿ B. S. Yediyurappa ಅವರ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಸುಮಾರು 20,000 ಜನರು ಸ್ವಯಂ ಪ್ರೇರಿತರಾಗಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ ಟಿಕೆಟ್ ಆಕಾಂಕ್ಷಿ Prabhakar Myasanayaka ತಿಳಿಸಿದ್ದಾರೆ.
ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕೇಂದ್ರ ಗೃಹ ಸಚಿವ Amit Shah ಆಗಮಿಸಲಿದ್ದಾರೆ ಎಂದು ಅವರು ಹೇಳಿದರು. ಅಪ್ರತಿಮ ಹೋರಾಟಗಾರ ಹಾಗೂ ರೈತ ನಾಯಕನಾದ ಯಡಿಯೂರಪ್ಪ ಅವರ ರಾಜಕೀಯ ಜೀವನದ 50 ವರ್ಷದ ಪಯಣದ ಅಂಗವಾಗಿ ಈ ಅಭಿಮಾನೋತ್ಸವವನ್ನು ಭವ್ಯವಾಗಿ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ 10 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ರಾಜ್ಯದಾದ್ಯಂತ ಭಾರಿ ಸಿದ್ಧತೆಗಳು ನಡೆದಿವೆ. ನಾಡಿನ ವಿವಿಧ ಮಠಾಧೀಶರು, ಸ್ವಾಮೀಜಿಗಳು ಹಾಗೂ ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವದಿಸಲಿದ್ದಾರೆ ಎಂದು ಹೇಳಿದರು.
ರಾಜ್ಯದ ವಿವಿಧ ಭಾಗಗಳಿಂದ ಅಭಿಮಾನಿಗಳು 10,000 ಬಸ್ಸುಗಳು ಹಾಗೂ 45 ರಿಂದ 50 ಸಾವಿರ ಕಾರು ಸೇರಿದಂತೆ ಅನೇಕ ವಾಹನಗಳಲ್ಲಿ ಆಗಮಿಸುವ ಸಾಧ್ಯತೆ ಇದೆ. ಅಲ್ಲದೆ, ಪಕ್ಕದ ಆಂಧ್ರ ಪ್ರದೇಶದ ಕಲ್ಯಾಣದುರ್ಗ ಹಾಗೂ ರಾಯದುರ್ಗ ಭಾಗಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಲಿದ್ದಾರೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು, ಸಂಸದರು, ಶಾಸಕರು ಹಾಗೂ ಮಾಜಿ ಜನಪ್ರತಿನಿಧಿಗಳು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಅಭಿಮಾನೋತ್ಸವದ ಅಧ್ಯಕ್ಷತೆಯನ್ನು ಚಿತ್ರದುರ್ಗ ಜಿಲ್ಲೆಯ ಸಂಸದ Govind Karjol ವಹಿಸಲಿದ್ದಾರೆ ಎಂದು ತಿಳಿಸಿದರು.
ಯಡಿಯೂರಪ್ಪ ಅವರ 50 ವರ್ಷಗಳ ಸಮಾಜಸೇವೆ ಮತ್ತು ರಾಜಕೀಯ ಪಯಣವನ್ನು ಸಾಂಸ್ಕೃತಿಕ ಹಬ್ಬದ ರೀತಿಯಲ್ಲಿ ಚಿತ್ರದುರ್ಗ ನಗರದಲ್ಲಿ ಆಚರಿಸಲಾಗುತ್ತಿದ್ದು, 100ಕ್ಕೂ ಹೆಚ್ಚು ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಪ್ರಭಾಕರ ಮ್ಯಾಸನಾಯಕ ಮನವಿ ಮಾಡಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.