September 15, 2025


ಹಿರಿಯೂರು :
ನಗರದ ರೋಟರಿ ಸಭಾಭವನದಲ್ಲಿ ಇದೇ ಅಕ್ಟೋಬರ್ 17 ರಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ರೋಟರಿ ಸಂಸ್ಥೆ ಹಾಗೂ ವಾಣಿವಿಲಾಸ ವಿದ್ಯಾಸಂಸ್ಥೆ(ರಿ) ಹಿರಿಯೂರು, ಇವರುಗಳ ವತಿಯಿಂದ ಸತತವಾಗಿ 11ನೇ ಬಾರಿಗೆ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಯಲ್ಲಿ ಅತಿಹೆಚ್ಚು ಅಂಕ ಪಡೆದ ಪತ್ರಿಭಾವಂತ ವಿದ್ಯಾರ್ಥಿಗಳಿಗೆ “ಪ್ರತಿಭಾಪುರಸ್ಕಾರ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ರೆಡ್ ಕ್ರಾಸ್ ಸಂಸ್ಥೆಯ ಚೇರ್ಮನ್ ಹೆಚ್.ಎಸ್.ಸುಂದರ್ ರಾಜ್ ತಿಳಿಸಿದ್ದಾರೆ.
ನಗರದ ವಾಣಿವಿಲಾಸ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರೆಡ್ ಕ್ರಾಸ್ ಹಾಗೂ ರೋಟರಿ ಸಂಸ್ಥೆಗಳ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ತುಮಕೂರು ರಾಮಕೃಷ್ಣ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ ವಹಿಸಲಿದ್ದು, ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರತಿಭಾ ಪುರಸ್ಕಾರ ಹಾಗೂ ನೆನಪಿನ ಕಾಣಿಕೆಗಳನ್ನು ನೀಡಿ ಗೌರವಿಸಿ ಸನ್ಮಾನಿಸಲಾಗುವುದು ಎಂಬುದಾಗಿ ಅವರು ತಿಳಿಸಿದ್ದಾರೆ.
ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ರೋಟರಿ ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸದಸ್ಯರುಗಳು, ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಮಕ್ಕಳ ಪೋಷಕರು ಭಾಗವಹಿಸುವ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಪೂರ್ತಿ ನೀಡುವ ಮೂಲಕ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂಬುದಾಗಿ ಅವರು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಹಿರಿಯ ರೋಟರಿ ಸದಸ್ಯರು ಹಾಗೂ ನಿಕಟಪೂರ್ವ ರೋಟರಿ ಅಧ್ಯಕ್ಷರಾದ ದೇವರಾಜಮೂರ್ತಿ, ಎಂ.ಎಸ್. ರಾಘವೇಂದ್ರ, ಪ್ರೊ.ಬಿ.ಕೆ.ನಾಗಣ್ಣ, ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಸುಂದರ್ ರಾಜ್, ಉಪಾಧ್ಯಕ್ಷರಾದ ಎ.ರಾಘವೇಂದ್ರ, ಹಿರಿಯ ರೊಟೇರಿಯನ್ ಆನಂದಶೆಟ್ಟಿ, ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರುಹನುಮಂತರಾಯಪ್ಪ, ಪಿ.ಆರ್. ಸತೀಶ್ ಬಾಬು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading