ಚಿತ್ರದುರ್ಗ ಅ.06:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಇದೇ ಅಕ್ಟೋಬರ್ 09ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧ್ಯಕ್ಷರು ಹಾಗೂ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ ಗೌಡ, ಕೆ.ಎಸ್.ನವೀನ್, ಡಿ.ಟಿ. ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್‍ಪೀರ್, ನಗರಸಭೆ ಅಧ್ಯಕ್ಷೆ ಎಂ.ಪಿ.ಅನಿತಾ ರಮೇಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ ಅಧ್ಯಕ್ಷ ಬಿ.ಪಿ.ಪ್ರೇಮನಾಥ್, ಹಿರಿಯ ನಾಗರಿಕರ ಜಿಲ್ಲಾ ಸಂಘ ಅಧ್ಯಕ್ಷ ಆರ್.ರಂಗಪ್ಪ ರೆಡ್ಡಿ ಭಾಗವಹಿಸುವರು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.
==========
About The Author
Discover more from JANADHWANI NEWS
Subscribe to get the latest posts sent to your email.