
ಚಿತ್ರದುರ್ಗ ನ.06:
ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿರುತ್ತದೆ.
ಆದ್ದರಿಂದ ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ ಇ-ಶ್ರಮ್ ನೋಂದಾಯಿತ ಎಲ್ಲಾ ಅರ್ಹ ಕಾರ್ಮಿಕರು ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ದೂರವಾಣಿ ಸಂಖ್ಯೆ 1800-425-9339 ಅಥವಾ ಸಹಾಯವಾಣಿ 1967ಕ್ಕೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯವರೆವಿಗೂ ಸಂಪರ್ಕಿಸುವಂತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.