December 15, 2025
IMG-20250207-WA0094.jpg

ಚಳ್ಳಕೆರೆ: ಗ್ರಾಮೀಣ ಭಾಗದ ಜನರು ಮೂಳೆ ಮತ್ತು ಕೀಲು ನೋವು ಕಿವಿ ಮೂಗು ಗಂಟಲು , ಸಾಮಾನ್ಯ ಸಂಬಂಧಿ ಕಾಯಿಲೆಗಳ ಚಿಕಿತ್ಸೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಶಿಬಿರದಲಿ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಿ ಎಂದು ಸಾಣೀಕೆರೆ ಆಡಳಿತ ವೈದ್ಯಾಧಿಕಾರಿ ಡಾ.ನಾಗರಾಜ್ ಹೇಳಿದರು.

ತಾಲ್ಲೂಕಿನ ಸಾಣೀಕೆರೆ ಪಂಚಾಯಿತಿ ವ್ಯಾಪ್ತಿಯ ಹೆಗ್ಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಪ್ರಕಾಶ್ ಸ್ಟಾಂಜ್ ಐರನ್ ಅಂಡ್ ಪವರ್ ಪ್ರೈವೆಟ್ ಲಿಮಿಟೆಡ್ ಕಂಪನಿ ಆಯುಷ್ ಆರೋಗ್ಯ ಮಂದಿರ ಮತ್ತು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ, ಅಳಗವಾಡಿ,ಹಾಗೂ ಹುಲಿಕುಂಟೆ, ಚಿತ್ರದುರ್ಗ ಜಿಲ್ಲೆ,ಇವರ ಸಂಯುಕ್ತ ಆಶ್ರಯದಲ್ಲಿ ನೆಡೆದ ಉಚಿತ ಆರೋಗ್ಯ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು . ಮಾನವರು ಯಾವುದೇ ರೀತಿಯ ಸಾಧನೆ ಮಾಡಬೇಕಾದರೆ ಆರೋಗ್ಯ ಅತ್ಯವಶ್ಯಕವಾಗಿದೆ ಇದರಿಂದ ಪ್ರತಿಯೊಬ್ಬರು ತಮ್ಮ ದಿನ ನಿತ್ಯ ಜೀವನದ ಕೆಲಸದ ಒತ್ತಡದ ಜೊತೆಗೆ ಬದುಕಿನಲ್ಲಿ ಆರೋಗ್ಯದ ಬಗ್ಗೆ ಗಮನಹರಿಸಿ ಉತ್ತಮ ಆರೋಗ್ಯ ಹೊಂದಬೇಕು ಎಂದರು.

ಪ್ರಕಾಶ್ ಸ್ಟಾಂಜ್ ಐರನ್ ಅಂಡ್ ಪವರ್ ಪ್ರೈವೆಟ್ ಲಿಮಿಟೆಡ್ ಕಂಪನಿಯ ರುದ್ರಪ್ಪ ಮಾತನಾಡಿ, ಉಚಿತ ಆಯುಷ್ ಆರೋಗ್ಯಚಿಕಿತ್ಸಾ ಶಿಬಿರ ಹಾಗೂ ಔಷಧಿಗಳ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಇಂದಿನ ದಿನಮಾನಗಳಲ್ಲಿ ದಿನದಿಂದ ದಿನಕ್ಕೆ ಅನೇಕ ಖಾಯಿಲೆಗಳು ಬರುತ್ತಿದ್ದು ಜನಗಳು ತಮ್ಮ ಕೆಲಸದ ಒತ್ತಡದ ಜೊತೆಗೆ ಆರೋಗ್ಯ ಬಗ್ಗೆ ಕಾಳಜಿವಹಿಸಬೇಕು,
ಮನುಷ್ಯ ದ್ಯಾನ ಯೋಗಾಸನ ಉತ್ತಮ ಆಹಾರ ಪದ್ದತಿ ಹೊಂದಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಿ.ಎಸ್.ಆರ್.ಮಂಜುನಾಥ್, ಕೆಂಚಪ್ಪ,ದುರುಗೇಶ್, ಮಂಜುನಾಥ್,ಆಯುರ್ವೇದ ಆಸ್ಪತ್ರೆ ಸಿಬ್ಬಂದಿ,ಶಾಲೆಯ ಸಿಬ್ಬಂದಿಗಳು ಗ್ರಾಮಸ್ಥರು, ಇದ್ದರು

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading