ಚಿತ್ರದುರ್ಗಫೆ.7:
ಸರ್ಕಾರಿ ಕಚೇರಿಗಳಿಗೆ ಆಗಮಿಸುವ ಹಿರಿಯ ನಾಗರಿಕರು ಹಾಗೂ ವಿಕಲಚೇತನರಿಗೆ ಅಧಿಕಾರಿಗಳು ಕುಳಿತುಕೊಳ್ಳಲು ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸಿ, ಸೌಜನ್ಯದಿಂದ ವರ್ತಿಸಬೇಕು. ಈ ಕುರಿತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಗೆ ಸುತ್ತೊಲೆ ಹೊರಡಿಸುವಂತೆ ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್ ಸೂಚನೆ ನೀಡಿದರು.
ನಗರದ ಉಪವಿಭಾಗಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಪಾಲಕರ ಮತ್ತು ಪೋಷಕರ ಸಂರಕ್ಷಣಾ ಕಾಯ್ದೆಯ ಅನುಷ್ಠಾನ, ವಿಕಲಚೇತನರ ಪುನರ್ವಸತಿ ಕೇಂದ್ರದ ಯೋಜನೆಯ ಜಿಲ್ಲಾ ಸಮನ್ವಯ ಸಮಿತಿ ಸಭೆ ಹಾಗೂ ವಿಕಲಚೇತನರ ಕುಂದುಕೊರತೆಗಳ ನಿವಾರಣಾ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರಿ ಬಸ್‌ಗಳಲ್ಲಿ ನಿಗದಿ ಪಡಿಸಿದ ಆಸನಗಳಲ್ಲಿ ಹಿರಿಯ ನಾಗರಿಕರು ಹಾಗೂ ವಿಕಲಚೇತನರಿಗಾಗಿ ಕುಳಿತು ಪ್ರಯಾಣಿಸಲು ನಿರ್ವಾಹಕರು ಅವಕಾಶ ಕಲ್ಪಿಸಿ ಕೊಡಬೇಕು. ಈ ಕುರಿತು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಬಸ್ ನಿರ್ವಾಹಕರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್ ಹೇಳಿದರು.
ಲೋಕಾದಾಲತ್ ಮೂಲಕ ಹಿರಿಯ ನಾಗರಿಕರ ಪ್ರಕರಣಗಳ ವಿಲೇವಾರಿ:
ಫೆ.28 ರಂದು ಜಿಲ್ಲೆಯಲ್ಲಿ ರಾಷ್ಟಿçÃಯ ಲೋಕಾದಾಲತ್ ಜರುಗಲಿದೆ. ಈ ವೇಳೆ ಉಪವಿಭಾಗಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಬಾಕಿರುವ ಹಿರಿಯ ನಾಗರಿಕರ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಪಕ್ಷಗಾರರ ಮನ ಒಲಿಸಬೇಕು. ಪೊಷಕರ ನಿರ್ವಹಣೆಗೆ ಹಣ ನೀಡುವಂತೆ ಆದೇಶ ಮಾಡಿದರು, ಕೆಲ ಮಕ್ಕಳು ಆದೇಶ ಪಾಲನೆ ಮಾಡುತ್ತಿಲ್ಲ. ಈ ಕುರಿತು ಹಿರಿಯ ನಾಗರಿಕರು ಪುನಃ ಕಚೇರಿಗೆ ಅಲೆಯುವಂತಾಗಿದೆ. ಹಿರಿಯ ನಾಗರಿಕರ ಕಲ್ಯಾಣಧಿಕಾರಿಗಳು ನಿರ್ವಹಣೆ ನೀಡಿದ ಆದೇಶಗಳು ಜಾರಿಯಾಗುವಂತೆ ಕ್ರಮ ವಹಿಸಬೇಕು. ನಗರದಲ್ಲಿ ಕಾಯ್ದೆಯಡಿ ನೊಂದಣಿಯಾಗದೆ ಕಾರ್ಯಚರಣೆ ನಡೆಸುತ್ತಿರುವ ವೃದ್ಧಾಶ್ರಮಗಳ ನೊಂದಣಿ ಕ್ರಮ ವಹಿಸಬೇಕು. ಸಂಧ್ಯಾ ಸುರಕ್ಷಾ ಯೋಜನೆಯಡಿ ರೂ.800 ಪಿಂಚಣಿ ಪಡೆಯುತ್ತಿರುವ 60 ವರ್ಷ ಮೇಲ್ಪಟ್ಟವರಿಗೆ 65 ವರ್ಷ ದಾಟಿದ ನಂತರ ರೂ.1,200 ನೀಡಲು ಸರ್ಕಾರ ಆದೇಶ ನೀಡಿದೆ. ಈ ಕುರಿತು ಪಿಂಚಣಿ ಅದಾಲತ್‌ಗಳ ಮೂಲಕ ಹಿರಿಯ ನಾಗರಿಕರಿಗೆ ಮಾಹಿತಿ ನೀಡಬೇಕು ಎಂದು ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್ ಸೂಚಿಸಿದರು.
ವಿಕಲಚೇತನರ ಅನುದಾನ ಬಳಕೆಗೆ ನಿರ್ದೇಶನ :
ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಶೇ.5 ರಷ್ಟು ಅನುದಾನವನ್ನು ವಿಕಲಚೇತನರ ಕಲ್ಯಾಣ ಕಾರ್ಯಕ್ರಮಗಳಿಗೆ ಬಳಸಲು ಸ್ಪಷ್ಟ ನಿರ್ದೇಶನವಿದೆ. ಆದರೆ ಗ್ರಾಮ ಪಂಚಾಯಿತಿಗಳು ಅನುದಾನ ಬಳಕೆ ಮಾಡುತ್ತಿಲ್ಲ. ವಿಕಲಚೇತನರಿಗೆ ಯಾವುದೇ ಕಾರ್ಯಕ್ರಮಗಳನ್ನು ರೂಪಿಸುತ್ತಿಲ್ಲ. ಕೂಡಲೇ ಅಧಿಕಾರಿಗಳು ಅನುದಾನ ಬಳಕೆಗೆ ಕ್ರಮ ಕೈಗೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್ ನಿರ್ದೇಶನ ನೀಡಿದರು.
ಚಿತ್ರದುರ್ಗ ಜಿಲ್ಲೆಯಲ್ಲಿ ಎರಡು ಅನುದಾನಿತ ವೃದ್ದಾಶ್ರಮಗಳು ಕಾರ್ಯನಿರ್ವಹಿಸುತ್ತಿವೆ. ಸಂಧ್ಯಾ ಸುರಕ್ಷಾ ಯೋಜನೆಯಡಿ 60 ವರ್ಷ ಮೇಲ್ಪಟ್ಟ 42,198 ಫಲಾನುಭವಿಗಳು ರೂ.800 ಹಾಗೂ 65 ವರ್ಷ ಮೇಲ್ಪಟ್ಟ 1,10,475 ಫಲಾನುಭವಿಗಳು ರೂ.1200 ಪಿಂಚಣಿ ಪಡೆಯುತ್ತಿದ್ದಾರೆ. ಹಿರಿಯ ನಾಗರಿಕರಿಗೆ ಸಂಬAಧಿಸಿದAತೆ ಜನವರಿ ಅಂತ್ಯಕ್ಕೆ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ 35 ಹಾಗೂ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ 19 ಪ್ರಕರಣಗಳು ದಾಖಲಾಗಿವೆ. 2011 ಜನಗಣತಿ ಅನುಸಾರ ಜಿಲ್ಲೆಯಲ್ಲಿ 35,971 ವಿಕಲಚೇತನರು ಇದ್ದು, 35,074 ವಿಕಲಚೇತನರಿಗೆ ಯುಡಿಐಡಿ ಕಾರ್ಡ್ ನೀಡಲಾಗಿದೆ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಕಲ್ಯಾಣಧಿಕಾರಿ ವೈಶಾಲಿ.ಜೆ ತಿಳಿಸಿದ್ದಾರೆ.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ ಡಾ.ರೇಣುಪ್ರಸಾದ್, ಉಪವಿಭಾಗಾಧಿಕಾರಿ ಕಚೇರಿ ತಹಶೀಲ್ದಾರ್ ನರಸಿಂಹಮೂರ್ತಿ, ಜಿಲ್ಲಾಸ್ಪತ್ರೆ ನಿವಾಸಿ ವೈದ್ಯಾಧಿಕಾ ಡಾ.ಆನಂದ್ ಪ್ರಕಾಶ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.