
ಚಳ್ಳಕೆರೆ: ವಿಕಲಚೇತನರು ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ಸಮಾಜದ ಮುಖ್ಯ ವಾಹಿನಿಗೆ ಬಂದು ಉತ್ತಮ ಜೀವನ ನಡೆಸಬೇಕು ಎಂದು ಶಾಸಕ ಟಿ ರಘುಮೂರ್ತಿ ಕರೆ ನೀಡಿದರು.





ನಗರಸಭೆ ಆವರಣದಲ್ಲಿ ನಡೆದ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ ಮತ್ತು ಘನತ್ಯಾಜ್ಯ ವಾಹನಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿತರಣೆ ಮಾಡಿ ಮಾತನಾಡಿದ ಅವರು ವಿಕಲಚೇತನರು ಜೀವನದಲ್ಲಿ ಬೇರೊಬ್ಬರನ್ನು ಅವಲಂಬಿಸದೆ ತಮ್ಮ ಜೀವನವನ್ನು ಸ್ವಾವಲಂಬನೆಯಿಂದ ಕಟ್ಟಿಕೊಂಡು ಉತ್ತಮವಾಗಿ ನಡೆಸಲಿ ಎಂಬ ಉದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಇವುಗಳ ಸದ್ಬಳಕೆ ಮಾಡಿಕೊಂಡು ಯಾರ ಹಂಗಿಲ್ಲದೆ ಬದುಕು ಕಟ್ಟಿಕೊಳ್ಳಬೇಕು ಎಂದು ತಿಳಿಸಿದರು. ಇದೆ ವೇಳೆ ನಗರಸಭೆಗೆ ಘನ ತ್ಯಾಜ್ಯ ವಿಲೇವಾರಿ ವಾಹನಗಳಿಗೆ ಚಾಲನೆ ನೀಡಿ ನಗರದ 31 ವಾರ್ಡ್ಗಳಲ್ಲಿ ಪ್ರತಿ ಮನೆಗಳಲ್ಲಿ ಕಸವನ್ನು ಸಂಗ್ರಹಿಸಿ ಪರಿಸರವನ್ನು ಸ್ವಚ್ಛವಾಗಿರುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು ನಗರ ಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದಾಗ ಮಾತ್ರ ತಾಲೂಕು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಜಗ್ಗರೆಡ್ಡಿ, ನಗರಸಭೆ ಅಧ್ಯಕ್ಷರಾದ ಮಂಜುಳಾ ಆರ್ ಪ್ರಸನ್ನಕುಮಾರ್, ಉಪಾಧ್ಯಕ್ಷೆ ಕವಿತಾ ಬೋರಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ್, ಸದಸ್ಯರುಗಳಾದ ರಮೇಶ್ ಗೌಡ, ರಾಘವೇಂದ್ರ ಸುಮಾ ಭರಮಯ್ಯ, ಸುಜಾತ ಪ್ರಹ್ಲಾದ್, ಜಯಲಕ್ಷ್ಮಿ ಕೃಷ್ಣಮೂರ್ತಿ, ಹೊಯ್ಸಳ ಗೋವಿಂದ, ಚಳಕೆರಪ್ಪ, ನಾಮ ನಿರ್ದೇಶನ ಸದಸ್ಯರಾದ ಬಡಗಿ ಪಾಪಣ್ಣ, ವೀರಭದ್ರ, ಅನ್ವರ್ ಮಾಸ್ಟರ್, ನೇತಾಜಿ ಪ್ರಸನ್ನಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಶಶಿಧರ, ಉಪ್ಪಾರ ಸಂಘದ ತಾಲ್ಲೂಕು ಅಧ್ಯಕ್ಷರಾದ ಹನುಮಂತಪ್ಪ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.