
ನಾಯಕನಹಟ್ಟಿ:: ಮಹರ್ಷಿ ಆದಿಕವಿ ವಾಲ್ಮೀಕಿ ಪುತ್ತಳಿಯ ಭೂಮಿ ಪೂಜೆಯನ್ನು ಶುಕ್ರವಾರ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಆಯೋಜಿಸಲಾಗಿದ್ದು
ಇನ್ನೂ ಮಹಾಋಷಿ ವಾಲ್ಮೀಕಿ ಪುತ್ತಳಿಯ ಭೂಮಿ ಪೂಜೆಯನ್ನು ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ನೆರವೇರಿಸಲಾಗುತ್ತಿದೆ ಎಂದು ಹಟ್ಟಿ ಮಲ್ಲಪ್ಪ ನಾಯಕ ಸಂಘದ ಅಧ್ಯಕ್ಷ ಪಾಟೀಲ್ ಜಿ ಎಂ ತಿಪ್ಪೇಸ್ವಾಮಿ ಎತ್ತಿನಹಟ್ಟಿ ಗೌಡ್ರು ಹೇಳಿದರು.
ಗುರುವಾರ ಸಂಜೆ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ನಾಯಕ ಸಮುದಾಯದ ಮುಖಂಡರ ಜೊತೆ ಮಹರ್ಷಿ ವಾಲ್ಮೀಕಿ ರವರ ಪುತ್ತಳಿ ಭೂಮಿ ಪೂಜೆಗೆ ಸಕಲ ಸಿದ್ಧತೆಯ ಕೈಗೊಂಡ ಹಿನ್ನೆಲೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪುಣ್ಯ ಕ್ಷೇತ್ರದಲ್ಲಿ ಮಹರ್ಷಿ ವಾಲ್ಮೀಕಿ ಪುತ್ತಳಿಯ ನಿರ್ಮಾಣವು ಬಹುದಿನದ ಕನಸು ಈಗ ನನಸಾಗಿದೆ ಹಟ್ಟಿ ಮಲ್ಲಪ್ಪ ನಾಯಕ ಸಂಘ ಹಾಗೂ ಹೋಬಳಿಯ ಸಮಸ್ತ ನಾಯಕ ಸಮುದಾಯದ ವತಿಯಿಂದ ಶುಕ್ರವಾರ ಬೆಳಗ್ಗೆ ಒಂಬತ್ತು ಗಂಟೆಯಿಂದ 11 ಗಂಟೆಯವರೆಗೆ ಆದಿಕವಿ ಮಹಾಋಷಿ ವಾಲ್ಮೀಕಿ ರವರ ಪುತ್ತಳಿ ಭೂಮಿ ಪೂಜೆ ನೆರವೇರಿಸಲಾಗಿದೆ ಆದ್ದರಿಂದ ಹೋಬಳಿಯ ಸಮಸ್ತ ನಾಯಕ ಸಮುದಾಯ ಸೇರಿದಂತೆ ಇತರೆ ಸಮುದಾಯದವರು ಮಹರ್ಷಿ ವಾಲ್ಮೀಕಿ ಪುತ್ತಳಿ ಭೂಮಿ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಹಟ್ಟಿ ಮಲ್ಲಪ್ಪ ನಾಯಕ ಸಂಘದ ನಿರ್ದೇಶಕರಾದ ಭೀಮ ಗೊಂಡನಹಳ್ಳಿ ಹನುಮಣ್ಣ, ರೇಖಲಗೆರೆ ಚಿನ್ನಯ್ಯ, ನಾಗರಾಜ್ ಹಾಗೂ ನಿಕಟ ಪೂರ್ವ ತಹಸಿಲ್ದಾರ್ ಎನ್ ರಘುಮೂರ್ತಿ, ನಲಗೇತನಹಟ್ಟಿ ನಲ್ಲನ ದೊಡ್ಡ ಬೋರಯ್ಯ, ಕಾರ್ಯದರ್ಶಿ ಜಿ.ವೈ. ತಿಪ್ಪೇಸ್ವಾಮಿ, ಟೀ ಬಸಪ್ಪ ನಾಯಕ ಜಿ.ಬಿ. ಮುದಿಯಪ್ಪ, ಬೋರಸ್ವಾಮಿ, ಏಜೆಂಟ್ರು ಪಾಲಯ್ಯ, ಬಂಗಾರಪ್ಪ, ಮಲ್ಲೂರಹಳ್ಳಿ ಮಲ್ಲಯ್ಯ, ಕರವೇ ಕನ್ನಡ ಸೇನೆ ತಾಲೂಕು ಅಧ್ಯಕ್ಷ ಪಿ ಮುತ್ತಯ್ಯ ಜಾಗನೂರಹಟ್ಟಿ, ಹೋಬಳಿ ಅಧ್ಯಕ್ಷ ಕೆ.ಜಿ. ಮಂಜುನಾಥ್ ಜೋಗಿಹಟ್ಟಿ, ನಗರ ಘಟಕ ಅಧ್ಯಕ್ಷ ತಿಪ್ಪೇಸ್ವಾಮಿ, ಚನ್ನಬಸಯ್ಯನಹಟ್ಟಿ ಕುಮಾರ್, ಕೊಂಡೈನಕೊಪಿಲೆ ಬೋರಣ್ಣ, ಸೇರಿದಂತೆ ಹೋಬಳಿಯ ನಾಯಕ ಸಮುದಾಯದ ಮುಖಂಡರು ಉಪಸ್ಥಿತರಿದ್ದರು
About The Author
Discover more from JANADHWANI NEWS
Subscribe to get the latest posts sent to your email.