September 22, 2026
IMG-20260807-WA0217


ಚಿತ್ರದುರ್ಗದ ಎಸ್.ಜೆ.ಎಂ. ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಮಹಾ ದಾಸೋಹಿ, ಶಿಕ್ಷಣ ಕ್ರಾಂತಿಯ ಹರಿಕಾರರಾದ ಪೂಜ್ಯ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳ 32ನೇ ಪುಣ್ಯಸ್ಮರಣೆಯನ್ನು ಭಕ್ತಿಭಾವದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು, ಅಧ್ಯಾಪಕರು ಹಾಗೂ ಪ್ರಾಂಶುಪಾಲರು ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.
ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಡಾ. ರಮೇಶ್ ಕೆ. ಮಾತನಾಡಿ, ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳ ಜೀವನ ಸಾಧನೆ, ಸಮಾಜಸೇವೆ, ಅನ್ನದಾಸೋಹ, ಅಕ್ಷರದಾಸೋಹ ಹಾಗೂ ಸಾಹಿತ್ಯ ಸೇವೆಯನ್ನು ಸ್ಮರಿಸಿದರು. ಕಾಶಿಯಲ್ಲಿ ಉನ್ನತ ವಿದ್ಯಾಭ್ಯಾಸ ಪಡೆದಿದ್ದ ಶ್ರೀಗಳು ವಚನ ಸಾಹಿತ್ಯವನ್ನು ಇತರೆ ಭಾಷೆಗಳಿಗೆ ಪರಿಚಯಿಸುವ ಮಹತ್ವಾಕಾಂಕ್ಷೆಯಿಂದ ಮೈಸೂರು ವಿಶ್ವವಿದ್ಯಾಲಯಕ್ಕೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿ ಹಿಂದಿ ಭಾಷೆಗೆ ಅನುವಾದ ಕಾರ್ಯಕ್ಕೆ ಪ್ರೋತ್ಸಾಹ ನೀಡಿದ್ದರು ಎಂದು ತಿಳಿಸಿದರು.
ಬರಪೀಡಿತ ಚಿತ್ರದುರ್ಗ ಜಿಲ್ಲೆಯಲ್ಲಿ ಶಿಕ್ಷಣದ ಬೆಳಕನ್ನು ಹರಡಬೇಕು ಎಂಬ ಸಂಕಲ್ಪದಿಂದ ಅವರು ಆರಂಭಿಸಿದ ಅಕ್ಷರದಾಸೋಹ ಇಂದು ಹೆಮ್ಮರವಾಗಿ ಬೆಳೆದು, ಶ್ರೀ ಮಲ್ಲಿಕಾರ್ಜುನ ವಿದ್ಯಾಪೀಠದ ಮೂಲಕ ನೂರಾರು ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಸಾವಿರಾರು ಮಂದಿಗೆ ಉದ್ಯೋಗದ ಅವಕಾಶ ಕಲ್ಪಿಸಿದೆ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಎಲ್. ಈಶ್ವರಪ್ಪ ಮಾತನಾಡಿ, ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಸ್ಥಾಪಿಸಿದ ಶಿಕ್ಷಣ ಸಂಸ್ಥೆಗಳು ಅನೇಕ ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಿದ್ದು, ಅವರ ಆದರ್ಶ, ಸಮಾಜಸೇವೆ ಹಾಗೂ ಶಿಕ್ಷಣದ ಸೇವೆ ಇಂದಿಗೂ ಎಲ್ಲರಿಗೂ ಸ್ಫೂರ್ತಿಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕರಾದ ಎಂ.ಎಸ್. ಪರಮೇಶ್ವರಪ್ಪ, ಬೋಧಕ ಸಿಬ್ಬಂದಿಗಳಾದ ಜಿ.ಎಸ್. ನಾಗರಾಜ, ಡಾ. ಗೋವಿಂದಪ್ಪ, ಎನ್.ಎಲ್. ಕುಮಾರ್ ಜಿ., ಡಾ. ರವಿ ಮಟ್ಟಿಹಾಳ, ಗಿರೀಶ್ ಟಿ., ನಿರ್ಮಲ್ ಜೆ. ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading