ಚಿತ್ರದುರ್ಗಅ.07:
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಮಂಗಳವಾರ ನಗರದಲ್ಲಿ ನಡೆದ ವಾಲ್ಮೀಕಿ ಭಾವಚಿತ್ರ ಹಾಗೂ ಪುತ್ಥಳಿ ಮೆರವಣಿಗೆ ವಿವಿಧ ಜಾನಪದ ಕಲಾತಂಡಗಳ ಸಮ್ಮುಖದಲ್ಲಿ ಸಡಗರ-ಸಂಭ್ರಮದಿAದ ಭವ್ಯ ಮೆರವಣಿಗೆ ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ನಾಯಕ ಸಮಾಜದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಾಲ್ಮೀಕಿ ಭಾವಚಿತ್ರ ಹಾಗೂ ಪುತ್ಥಳಿ ಮೆರವಣಿಗೆಗೆ ನಗರದ ಐತಿಹಾಸಿಕ ಕೋಟೆ ಮುಂಭಾಗದಲ್ಲಿ ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ವಾಲ್ಮೀಕಿ ಪುತ್ಥಳಿಗೆ ಪುಷ್ಪಾರ್ಪಣೆ ಮಾಡುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಐತಿಹಾಸಿಕ ಕೋಟೆ ಮುಂಭಾಗದಿAದ ಆರಂಭವಾದ ಅದ್ದೂರಿ ಮೆರವಣಿಗೆಯು, ಏಕನಾಥೇಶ್ವರಿ ದೇವಸ್ಥಾನ, ಹುಚ್ಚೆಂಗಿಯಲ್ಲಮ್ಮ ದೇವಸ್ಥಾನದ ಮುಂಭಾಗದಿAದ ಆನೆಬಾಗಿಲು, ಗಾಂಧಿವೃತ್ತ, ಎಸ್‌ಬಿಐ ವೃತ್ತ, ಪ್ರವಾಸಿ ಮಂದಿರ ಮಾರ್ಗವಾಗಿ ಅಂಬೇಡ್ಕರ್ ವೃತ್ತ, ಮದಕರಿ ನಾಯಕ ವೃತ್ತದಿಂದ ವೇದಿಕೆ ಕಾರ್ಯಕ್ರಮ ನಡೆಯುವ ವಾಲ್ಮೀಕಿ ಭವನದವರೆಗೂ ನಡೆಯಿತು.
ಮೆರವಣಿಗೆಯಲ್ಲಿ ಕಹಳೆ ವಾದನ, ತ್ರಾಷ್ ಡೋಲು, ಗೊಂಬೆ ಕುಣಿತ, ಕೀಲು ಕುದರೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಯ ಮೆರಗು ಹೆಚ್ಚಿಸುವ ಮೂಲಕ ಸಾಂಸ್ಕೃತಿಕ ರಂಗನ್ನು ತುಂಬಿದವು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ತಹಶೀಲ್ದಾರ್ ಗೋವಿಂದರಾಜ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿ ಜೆ.ವೈಶಾಲಿ, ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಸಂದೀಪ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ದಿವಾಕರ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಸಮಾಜದ ಬಾಂಧವರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
About The Author
Discover more from JANADHWANI NEWS
Subscribe to get the latest posts sent to your email.