ಚಳ್ಳಕೆರೆ: ಕರ್ನಾಟಕ ರಾಜ್ಯ 6ರಿಂದ 8ನೇ ತರಗತಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಳ್ಳಕೆರೆ ತಾಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ಚಳ್ಳಕೆರೆ ತಾಲೂಕು ಘಟಕದ ಅಧ್ಯಕ್ಷರಾಗಿ ತಿಪ್ಪೇಸ್ವಾಮಿ ಡಿ., ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಿ ಎಸ್. ಹಾಗೂ ಖಜಾಂಚಿಯಾಗಿ ಹೊನ್ನೂರು ಭಾಪು ಅವರನ್ನು ಆಯ್ಕೆ ಮಾಡಲಾಗಿದೆ.
ನೂತನ ಪದಾಧಿಕಾರಿಗಳ ಆಯ್ಕೆಯ ಹಿನ್ನೆಲೆಯಲ್ಲಿ ಶಿಕ್ಷಕರ ವಲಯದಿಂದ ಅಭಿನಂದನೆಗಳು ವ್ಯಕ್ತವಾಗಿವೆ. ಸಂಘದ ಮೂಲಕ ತಾಲೂಕಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವುದು, ಶಿಕ್ಷಕರ ಹಕ್ಕುಗಳು ಹಾಗೂ ಶ್ರೇಯೋಭಿವೃದ್ಧಿಗಾಗಿ ಕಾರ್ಯನಿರ್ವಹಿಸುವುದಾಗಿ ನೂತನ ಪದಾಧಿಕಾರಿಗಳು ತಿಳಿಸಿದ್ದಾರೆ.
ತಾಲೂಕಿನ ಎಲ್ಲಾ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಸಂಘದೊಂದಿಗೆ ಒಗ್ಗೂಡಿಸಿಕೊಂಡು, ಶಿಕ್ಷಕರ ವೃತ್ತಿಪರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ

About The Author
Discover more from JANADHWANI NEWS
Subscribe to get the latest posts sent to your email.