ಹಿರಿಯೂರು :
ಇಂದಿನ ಯುವ ಪೀಳಿಗೆ ಯಾವುದೇ ದುಶ್ಚಟಗಳಿಗೆ ಬಲಿಯಾಗಿ ಆರೋಗ್ಯವನ್ನು ಹಾಳು ಮಾಡಿಕೊಳ್ಳದೆ, ತಂಬಾಕು, ಸಿಗರೇಟ್ ನಂತರ ಮಾದಕ ವಸ್ತುಗಳಿಂದ ದೂರವಿದ್ದು, ನಿಮ್ಮ ಆರೋಗ್ಯ ಸಂರಕ್ಷಣೆ ಮಾಡಿಕೊಳ್ಳುತ್ತೇವೆಂದು ಸಂಕಲ್ಪ ಮಾಡಬೇಕು, ಆಗ ಮಾತ್ರ ಸ್ವಾಸ್ತ್ಯ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಎಂಬುದಾಗಿ ವಾಣಿಸಕ್ಕರೆ ಕಾಲೇಜಿನ ನಿಕಟ ಪೂರ್ವ ಪ್ರಾಂಶುಪಾಲರು ಹಾಗೂ ಪ್ರಾಧ್ಯಾಪಕರಾದ ಡಾ.ಡಿ.ಧರಣೇಂದ್ರಯ್ಯ ಹೇಳಿದರು.
ನಗರದ ಮೌಲನ ಆಜಾದ್ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮವನ್ನು ಉದ್ಘಾಟಿಸಿ, ನಂತರ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ, ನಾಸೀರ್ ರವರು ಮಾತನಾಡಿ, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸಮಾಜಕ್ಕೆ ಮಾರಕವಾದ ಕೆಟ್ಟ ದೃಶ್ಯಗಳಿಂದ ಮಾನಸಿಕ ಆರೋಗ್ಯ ಹಾಳು ಮಾಡಿಕೊಳ್ಳದೆ, ಅಗತ್ಯ ಸಂದರ್ಭದಲ್ಲಿ ಮಾತ್ರ ಟಿ.ವಿ.ಹಾಗೂ ಮೊಬೈಲ್ ಗಳ ಬಳಕೆ ಮಾಡಿ, ಮಾನಸಿಕ ದೃಢತೆಯನ್ನು ಕಾಯ್ದುಕೊಳ್ಳಬೇಕು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಈ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಸಹ ಶಿಕ್ಷಕಿಯಾದ ಶ್ರೀಮತಿ ರುಕಯ್ಯ, ವಲಯದ ಮೇಲ್ವಿಚಾರಕರಾದ ಶಿವಕುಮಾರ ಸೇವಾ ಪ್ರತಿನಿಧಿಗಳಾದ ಕಶ್ಬುನ್ನೀಸಾ, ಶ್ರೀಮತಿ ಪುಷ್ಪವತಿ ಮತ್ತು ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


About The Author
Discover more from JANADHWANI NEWS
Subscribe to get the latest posts sent to your email.