ಹಿರಿಯೂರು :
ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ.ಎಚ್.ಎಲ್.ನಾಗರಾಜು ಅವರು ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ನೂತನ ಉತ್ತರಾಧಿಕಾರಿಯಾಗಿ ಅಧಿಕಾರ ಸ್ವೀಕರಿಸುವುದು ಖಚಿತವಾಗಿದೆ, ಇದೇ ಡಿಸೆಂಬರ್ 15 ರಂದು ಜಗದ್ಗುರು ಶ್ರೀ ನಿಶ್ಚಲಾನಂದನಾಥ ಮಹಾಸ್ವಾಮೀಜಿ ಎಂಬ ನೂತನ ನಾಮಕರಣದೊಂದಿಗೆ ಪೀಠಾರೋಹಣ ಮಾಡಲಿದ್ದಾರೆ.
ಅನಾರೋಗ್ಯದ ಕಾರಣದಿಂದಾಗಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾಗಿರುವ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರು ಪೀಠತ್ಯಾಗ ಮಾಡುತ್ತಿದ್ದು, ಅವರ ಸ್ಥಾನಕ್ಕೆ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ.ಎಚ್.ಎಲ್.ನಾಗರಾಜು ಪೀಠವನ್ನು ಅಲಂಕರಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದಿಂದ ಸುಮಾರು 2011 ರಲ್ಲಿ ಸನ್ಯಾಸ ದೀಕ್ಷೆ ಪಡೆದಿದ್ದ ಡಾ.ಎಚ್.ಎಲ್.ನಾಗರಾಜುರವರು ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ಎಂದು ನಾಮಕರಣಗೊಂಡಿದ್ದರು. ಅಂದು ಕುಟುಂಬದವರು, ಹಿತೈಷಿಗಳು ಸ್ನೇಹಿತರ ಒತ್ತಡಕ್ಕೆ ಮಣಿದು ಮತ್ತೆ ಸರ್ಕಾರಿ ಸೇವೆಗೆ ಮರಳಿದ್ದರು. ಇದೀಗ ಮತ್ತೆ ಅದೇ ಹೆಸರಿನೊಂದಿಗೆ ವಿಶ್ವ ಒಕ್ಕಲಿಗರ ಮಠದ ಪೀಠಾರೋಹಣ ಮಾಡುತ್ತಿದ್ದಾರೆ.
ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ನೂತನ ಉತ್ತರಾಧಿಕಾರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ರವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಹಿರಿಯ ಪತ್ರಕರ್ತರುಗಳಾದ ಆಲೂರುಹನುಮಂತರಾಯಪ್ಪ ಹಾಗೂ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಕೋರಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.