ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ (ಮೈಸೂರು ಜಿಲ್ಲೆ): ಸಾಲಿಗ್ರಾಮ ಪಟ್ಟಣದಲ್ಲಿ ಎಸ್ ಸಿ ಎಜುಕೇಷನ್ ಲೀಗ್ ವಿದ್ಯಾಸಂಸ್ಥೆಯನ್ನು ಸ್ಥಾಪಿಸುವ ಮೂಲಕ ಸಿ.ಕಾಳಯ್ಯ ಅವರು ಶಿಕ್ಷಣ ಕ್ಷೇತ್ರಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಅವರು ಪಟ್ಟಣದ ಶ್ರೀ ಚನ್ನಕೇಶವ ವಿದ್ಯಾಸಂಸ್ಥೆಯ ಆವರಣದಲ್ಲಿ ಎಸ್ ಸಿ ಎಜುಕೇಶನ್ ಲೀಗ್ ವಿದ್ಯಾ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.


ಶ್ರೀ ಚನ್ನಕೇಶವ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಉತ್ತಮವಾಗಿ ವ್ಯಾಸಂಗ ಮಾಡಿ ಉನ್ನತ ಸ್ಥಾನಮಾನಗಳನ್ನು ಅಲಂಕರಿಸಬೇಕು. ಕಾಳಯ್ಯ ಅವರು ನಡೆದು ಬಂದ ಹಾದಿಯಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಎಲ್ಲರೂ ಸಾಗಬೇಕು. ಅವರ ಆದರ್ಶ ಗುಣಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಒಂದು ವಿದ್ಯಾಸಂಸ್ಥೆಯನ್ನು ಸ್ಥಾಪಿಸಿ ಅದನ್ನು ಯಶಸ್ವಿಯಾಗಿ 50 ವರ್ಷಗಳ ಕಾಲ ಮುನ್ನಡೆಸಿಕೊಂಡು ಬರುವುದು ಅಷ್ಟೊಂದು ಸುಲಭವಾದ ಕೆಲಸವಲ್ಲ. ಎಲ್ಲಾ ಕಷ್ಟ ಸುಖಗಳ ನಡುವೆಯೂ ಸಂಸ್ಥೆಯನ್ನು ಗಟ್ಟಿಯಾಗಿ ಕಟ್ಟಿ ಮುನ್ನಡೆಸಿಕೊಂಡು ಬರುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆಯನ್ನು ನೀಡಿರುವ ಎಸ್ ಸಿ ಎಜುಕೇಶನ್ ಲೀಗ್ ವಿದ್ಯಾಸಂಸ್ಥೆಯ ಕಾರ್ಯವು ಇತರ ವಿದ್ಯಾಸಂಸ್ಥೆಗಳಿಗೆ ಮಾದರಿಯಾಗಿದೆ. ಇಂತಹ ಸಂಸ್ಥೆಯು ಮುಂದೆಯೂ ಉತ್ತಮವಾಗಿ ನಡೆಯುವ ಮೂಲಕ ಸಾವಿರಾರು ವಿದ್ಯಾರ್ಥಿಗಳ ಬದುಕಿನಲ್ಲಿ ಶಿಕ್ಷಣದ ಬೆಳಕನ್ನು ಮೂಡಿಸುವಂತಾಗಲಿ ಎಂದು ಆಶಿಸಿದರು.
ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಅವಧಿಯಲ್ಲಿ ಶ್ರದ್ಧೆಯಿಂದ ಕಲಿಯುವ ಮೂಲಕ ಉನ್ನತ ಶಿಕ್ಷಣವನ್ನು ಪಡೆದು ದೊಡ್ಡ ಮಟ್ಟದ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಶ್ರೀ ಚನ್ನಕೇಶವ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಸಿ.ಕಾಳಯ್ಯ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆಯನ್ನು ಮಾಡಲಾಯಿತು.
ಈ ಸಂಧರ್ಭದಲ್ಲಿ ಹಲವು ಗಣ್ಯರುಗಳನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ವಿವಿಧ ಕಲಾ ತಂಡಗಳಿಂದ ಗೀತ ಗಾಯನವನ್ನು ಮಾಡಲಾಯಿತು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಸ್.ಎನ್.ನರಗುಂದ, ಸಂಸ್ಥೆಯ ಅಧ್ಯಕ್ಷೆ ನಾಗರತ್ನ, ಗೌರವ ಕಾರ್ಯದರ್ಶಿ ಎಂ.ಚನ್ನಮಲ್ಲಯ್ಯ, ನಿರ್ದೇಶಕರುಗಳಾದ ಹೊನ್ನಪ್ಪ, ಕೃಷ್ಣಯ್ಯ, ಬಸವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್, ತಾ.ಪಂ. ಮಾಜಿ ಅಧ್ಯಕ್ಷ ಚಂದ್ರಶೇಖರ್, ಗ್ರಾ.ಪಂ. ಅಧ್ಯಕ್ಷೆ ಫಾತಿಮಾ ಉನ್ನಿಸ, ಉಪಾಧ್ಯಕ್ಷೆ ಶಶಿಕಲಾ, ಸದಸ್ಯರುಗಳಾದ
ಎಸ್.ಆರ್.ಪ್ರಕಾಶ್, ಸುಧಾರೇವಣ್ಣ, ಶ್ವೇತಾಸತೀಶ್, ಹರೀಶ್, ಶಕೀಲ್, ಗಂಗಾಧರ್, ನೀಲಮ್ಮ, ಮಂಜುಳಾ, ಕಾಂಗ್ರೆಸ್ ಪಕ್ಷದ ನಗರಾಧ್ಯಕ್ಷ ಪ್ರಭಾಕರ್, ಸಿಡಿಸಿ ಸದಸ್ಯ ಸಂತೋಷ, ಮುಖಂಡರುಗಳಾದ ರಾಮಯ್ಯ, ಅರುಣ್ ರಾಜ್, ಗುಣಪಾಲ್ ಜೈನ್, ಬಲರಾಮೇಗೌಡ, ಮೈಕಲ್, ಗೋಪಾಲ, ಗಿರೀಶ್, ಲಕ್ಕಿಕುಪ್ಪೆಮಂಜೇಗೌಡ, ಬಸವಣ್ಣ, ಡಿ.ದೇವರಾಜು, ಶ್ರೀನಿವಾಸ್, ಮುತ್ತರ್ ಪಾಷಾ, ವಾಸಿಂ, ಶೌಕತ್, ಸಂಸ್ಥೆಯ ಪ್ರಾಂಶುಪಾಲರು, ಉಪನ್ಯಾಸಕರು, ಮುಖ್ಯಶಿಕ್ಷಕರು, ಶಿಕ್ಷಕ ವೃಂದ, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಸೇರಿದಂತೆ ಹಲವರು ಭಾಗವಹಿಸಿದ್ದರು.
About The Author
Discover more from JANADHWANI NEWS
Subscribe to get the latest posts sent to your email.