December 14, 2025
FB_IMG_1736305861096.jpg


ಹಿರಿಯೂರು :
ಹಿರಿಯ ನಾಗರೀಕರ ಸುರಕ್ಷತೆಗಾಗಿ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಹಿರಿಯ ನಾಗರೀಕರ ಯೋಗಕ್ಷೇಮಕ್ಕಾಗಿ ರಾಜ್ಯಸರ್ಕಾರದ ಅನುದಾನದಡಿಯಲ್ಲಿ ಸ್ವಯಂಸೇವಾ ಸಂಸ್ಥೆಗಳ ಮೂಲಕ ಲಘು ಉಪಹಾರ, ಮನೋರಂಜನೆ ಕಾರ್ಯಕ್ರಮ, ಆರೋಗ್ಯ ತಪಾಸಣೆ ಶಿಬಿರಗಳನ್ನು ನಡೆಸಲಾಗುತ್ತಿದೆ ಎಂಬುದಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣ ಅಧಿಕಾರಿ ಜೆ.ವೈಶಾಲಿ ಹೇಳಿದರು.
ನಗರದ ರೋಟರಿ ಸಭಾಭವನದಲ್ಲಿ ಜಿಲ್ಲಾಪಂಚಾಯತ್ ಚಿತ್ರದುರ್ಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿತ್ರದುರ್ಗ, ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ, ಚಿತ್ರದುರ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ “ಹಿರಿಯ ನಾಗರೀಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯ ನಾಗರೀಕರಿಗೆ ರಾಜ್ಯ ಸರ್ಕಾರಿ ವಾಹನಗಳಲ್ಲಿ ಶೇ.25 ರಷ್ಟು ರಿಯಾಯಿತಿ, ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯವೇತನ ಯೋಜನೆಯಡಿ 800 ರೂಗಳ ಮಾಶಾಶನ, ಸಂಧ್ಯಾಸುರಕ್ಷಾ ಯೋಜನೆಯಡಿ 65 ವರ್ಷ ಮೇಲ್ಪಟ್ಟವರಿಗೆ 1200 ರೂಗಳ ಮಾಸಾಶನ, ಅಲ್ಲದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಿರಿಯ ನಾಗರೀಕರಿಗೆ ಗುರುತಿನ ಚೀಟಿಗಳನ್ನು ನೀಡಲಾಗುತ್ತಿದೆ ಎಂದರಲ್ಲದೆ,
ಜಿಲ್ಲೆಯಾದ್ಯಂತ ಹಿರಿಯ ನಾಗರೀಕರಿಗೆ ಉಚಿತ ನೇತ್ರ ತಪಾಸಣೆ ಶಿಬಿರಗಳನ್ನು ನಡೆಸಲಾಗುತ್ತಿದ್ದು, ಈ ಶಿಬಿರಗಳಲ್ಲಿ ಕಣ್ಣಿನ ಉಚಿತ ತಪಾಸಣೆ ಹಾಗೂ ಕಣ್ಣಿನ ಶಸ್ತ್ರ ಚಿಕಿತ್ಸೆ ಅಗತ್ಯವಿರುವ ಹಿರಿಯ ನಾಗರೀಕರಿಗೆ ಚಿಕಿತ್ಸೆ ನಂತರ ಅಗತ್ಯವಿರುವ ಕನ್ನಡಕಗಳನ್ನು ಸಹ ಉಚಿತವಾಗಿ ಕೊಡಲಾಗುತ್ತಿದ್ದು, ಹಿರಿಯ ನಾಗರೀಕರು ಇದರ ಸದುಪಯೋಗ ಪಡೆಯಬೇಕು ಎಂಬುದಾಗಿ ಹೇಳಿದರು.
ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ.ಬಸವರಾಜ್ ಮಾತನಾಡಿ, ನಿರ್ಗತಿಕರಾದ ಹಿರಿಯ ನಾಗರೀಕರಿಗಾಗಿಯೇ ಸುಮಾರು 60 ಕ್ಕೂ ವೃದ್ಧಾಶ್ರಮಗಳನ್ನು ತೆರೆಯಲಾಗಿದ್ದು, ಈ ಮೂಲಕ ವೃದ್ಧರಿಗೆ ಉಚಿತ ವಸತಿ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಅಸಹಾಯಕ ವೃದ್ಧರು ಸಮಾಜದಲ್ಲಿ ಯಾರ ಹಂಗೂ ಇಲ್ಲದೆ ನಿಶ್ಚಿಂತೆಯಿಂದ ಬಾಳುವಂತೆ ಮಾಡಲಾಗುತ್ತಿದೆ ಎಂದರಲ್ಲದೆ,
ಜಿಲ್ಲೆಯಲ್ಲಿ ಕೇಂದ್ರಸರ್ಕಾರದ ಅನುದಾನದಡಿ 2ವೃದ್ಧಾಶ್ರಮಗಳು ಕಾರ್ಯನಿರ್ವಹಿಸುತ್ತಿವೆ, ಅಲ್ಲದೆ ಹಿರಿಯ ನಾಗರೀಕರ ತುರ್ತು ಸಹಾಯಕ್ಕಾಗಿಯೇ ಹಿರಿಯ ನಾಗರೀಕರ ಸಹಾಯವಾಣಿಕೇಂದ್ರಗಳನ್ನು ತೆರೆಯಲಾಗಿದ್ದು, ಈ ಕೇಂದ್ರಗಳು ದಿನದ 24 ಗಂಟೆಗಳೂ ಕಾರ್ಯನಿರ್ವಹಿಸುತ್ತಿವೆ, ಶೋಷಣೆಗೊಳಗಾದ ಹಿರಿಯ ನಾಗರೀಕರು ಇವುಗಳ ಸಹಾಯ ಪಡೆಯಬಹುದಾಗಿದೆ ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ನೇತ್ರತಜ್ಞರಾದ ಡಾ.ಸಂದೀಪ್, ಡಿಡಿಆರ್.ಸಿ ಅಧಿಕಾರಿಗಳು, ತಾಲ್ಲೂಕಿನ ಎಲ್ಲಾ ಗ್ರಾಮಪಂಚಾಯಿತಿಯ ವಿ.ಆರ್.ಡಬ್ಲೂ ಅಧಿಕಾರಿಗಳು ಸೇರಿದಂತೆ ಹಿರಿಯ ನಾಗರೀಕರು ಹಾಗೂ ಸಾಋ್ವಜನಿಕರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading