December 14, 2025
6-192.jpg


ಚಿತ್ರದುರ್ಗಜ.08:
2024-25ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಜಿಲ್ಲೆಯ 15 ವರ್ಷ ಮೇಲ್ಪಟ್ಟ ವಯಸ್ಸಿನ ದೈಹಿಕ ವಿಕಲಚೇತನರಿಗಾಗಿ ಬ್ಯಾಟರಿ ಚಾಲಿತ ವೀಲ್‍ಚೇರ್ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜ.21 ಅರ್ಜಿ ಸಲ್ಲಿಸಲು ಕೊನೆಯ ದಿನ.
ಬ್ಯಾಟರಿ ಚಾಲಿತ ವೀಲ್‍ಚೇರ್ ಯೋಜನೆಯಡಿ ಪ್ರಯೋಜನ ಪಡೆಯಲು 15 ವರ್ಷ ಮೇಲ್ಪಟ್ಟ ವಯಸ್ಸಿನ ದೈಹಿಕ ವಿಕಲಚೇತನರು ಕಡ್ಡಾಯವಾಗಿ ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ), ವೈದ್ಯಕೀಯ ಪ್ರಮಾಣ ಪತ್ರ (ಶೇ.75ಕ್ಕಿಂತ ಹೆಚ್ಚಿನ ದೈಹಿಕ ವಿಕಲತೆ ಇರುವವರಿಗೆ ಮಾತ್ರ), ಇತ್ತೀಚಿನ ಆದಾಯ ಪ್ರಮಾಣ ಪತ್ರ, ಯಂತ್ರಚಾಲಿತ ದ್ವಿಚಕ್ರ ವಾಹನ ಪಡೆಯದಿರುವ ಬಗ್ಗೆ ರೂ.20/ಗಳ ಛಾಪಕಾಗದ ನೋಟರಿ ದೃಢೀಕರಣ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಯಂತ್ರಚಾಲಿತ ದ್ವಿಚಕ್ರ ವಾಹನ (ರೆಟ್ರೋಫಿಟ್‍ಮೆಂಟ್ ಸಹಿತ) ಪಡೆದಿರುವ ವಿಕಲಚೇತನರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅನರ್ಹರಾಗಿರುತ್ತಾರೆ. ಈ ಯೋಜನೆ www.sevasindhuservices.karnataka.gov.in/ ವೆಬ್‍ಸೈಟ್ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು.
ಮಾಹಿತಿಗಾಗಿ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇನತರ ಕಲ್ಯಾಣಾಧಿಕಾರಿಗಳ ಕಚೇರಿ, ಬಾಲಭವನ ಆವರಣ, ಸ್ಟೇಡಿಯಂ ಹತ್ತಿರ, ಚಿತ್ರದುರ್ಗ ದೂರವಾಣಿ ಸಂಖ್ಯೆ 08194-235284 ಗೆ ಸಂಪರ್ಕಿಸಬಹುದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading