ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ (ಮೈಸೂರು ಜಿಲ್ಲೆ): ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಅವಧಿಯಲ್ಲಿ ಶ್ರದ್ಧೆಯಿಂದ ಕಲಿತು ಉನ್ನತ ಸ್ಥಾನವನ್ನು ಹೊಂದಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.



ಅವರು ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುವ ಸಮಯ ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖವಾಗಿದ್ದು ಈ ಅವಧಿಯಲ್ಲಿ ಗುರು ಹಿರಿಯರ ಮಾರ್ಗದರ್ಶನದಲ್ಲಿ ಉತ್ತಮವಾಗಿ ಕಲಿಯುವ ಮೂಲಕ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದರು.

ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಲ್ಲಿ ಓದಿನ ಜೊತೆ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪರಿಪೂರ್ಣ ವ್ಯಕ್ತಿಗಳಾಗಬೇಕು.
ಗ್ರಾಮೀಣ ಪ್ರದೇಶದಲ್ಲಿ ಬಹುಮುಖ ಪ್ರತಿಭೆಗಳು ಬಹಳಷ್ಟು ಇವೆ. ಅವರುಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಶಿಕ್ಷಕರುಗಳು, ಪೋಷಕರುಗಳು, ಸಾರ್ವಜನಿಕರು ಸೇರಿದಂತೆ ಸರ್ವರೂ ಮಾಡುವ ಮೂಲಕ ಯಾವ ವ್ಯಕ್ತಿಗೆ ಯಾವ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ಇರುತ್ತದೆ ಆ ಕ್ಷೇತ್ರದಲ್ಲಿ ಉತ್ತಮವಾದ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತರುವಂತೆ ಮಾಡಬೇಕು ಎಂದು ಹೇಳಿದರು.
ಸಾಲಿಗ್ರಾಮವು ತಾಲೂಕು ಕೇಂದ್ರವಾಗಿದ್ದು ಇಲ್ಲಿರುವ ಶಾಲಾ-ಕಾಲೇಜುಗಳನ್ನು ಹೆಚ್ಚಿನ ಮಟ್ಟದಲ್ಲಿ ಅಭಿವೃದ್ಧಿಪಡಿಸುವ ಸಲುವಾಗಿ ಶಾಲಾ ಕಾಲೇಜುಗಳಿಗೆ ಅತ್ಯಗತ್ಯವಾಗಿ ಬೇಕಾಗಿರುವ ಮೂಲಭೂತ ಸೌಲಭ್ಯಗಳನ್ನು ಅತಿ ಶೀಘ್ರದಲ್ಲಿ ಕಲ್ಪಿಸಿ ಕೊಡಲಾಗುವುದು ಎಂದು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಕಳೆದ ಸಾಲಿನಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದ ಶ್ರೇಯಸ್ ಹಾಗೂ ವಿವಿಧ ಕ್ಷೇತ್ರದ ಸಾಧಕರುಗಳನ್ನು ಸನ್ಮಾನಿಸಲಾಯಿತು.
ಸಿಡಿಸಿ ಉಪಾಧ್ಯಕ್ಷ ಎಸ್.ಎಂ.ಪರಿಕ್ಷಿತ್ ಮಾತನಾಡಿ ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೌಚಾಲಯ, ವಿದ್ಯುತ್ ಸಂಪರ್ಕ, ಪ್ರತ್ಯೇಕ ಕೊಠಡಿಗಳು, ಕ್ರೀಡಾಂಗಣ ಸೇರಿದಂತೆ ಹಲವು ಮೂಲಭೂತ ಸೌಲಭ್ಯಗಳು ಅಗತ್ಯವಾಗಿ ಬೇಕಾಗಿದ್ದು ಶಾಸಕರು ಕಾಲೇಜಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕೊಡಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಉದಯಶಂಕರ್, ತಾ.ಪಂ.ಮಾಜಿ ಸದಸ್ಯರಾದ ಎ.ಟಿ.ಗೋವಿಂದೇಗೌಡ, ಸಣ್ಣಪ್ಪ, ಕಾಂಗ್ರೆಸ್ ಪಕ್ಷದ ನಗರಾಧ್ಯಕ್ಷ ಪ್ರಭಾಕರ್, ಎಸ್ ಸಿ ಘಟಕದ ಅಧ್ಯಕ್ಷ ಕಂಠಿಕುಮಾರ್, ಶಿವಮೊಗ್ಗ ಜಿಲ್ಲಾ ಕಾರ್ಮಿಕ ಅಧಿಕಾರಿ ವೇಣುಗೋಪಾಲ್, ಪ್ರಾಂಶುಪಾಲ ಬಿ.ಸುರೇಶ್, ಬಾಲಕಿಯರ ಕಾಲೇಜಿನ ಪ್ರಾಂಶುಪಾಲ
ಶಿವಶಂಕರ್, ತಾಲೂಕು ಉಪನ್ಯಾಸಕರ ಸಂಘದ ನಿರ್ದೇಶಕ ಕೆ.ಎಂ.ಮುರಳಿ, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಮಧುಕುಮಾರ್, ಗ್ರಾ.ಪಂ. ಉಪಾಧ್ಯಕ್ಷ
ಎಸ್.ಎನ್.ರಂಗಸ್ವಾಮಿ, ಮುಖಂಡರುಗಳಾದ ಅಪ್ಪುಶ್ರೀನಿವಾಸ್, ಬಲರಾಮೇಗೌಡ, ಗುಣಪಾಲ ಜೈನ್, ಕೊತ್ವಾಲ್ ಮಂಜುನಾಥ್, ಲಕ್ಕಿಕುಪ್ಪೆ ಮಂಜೇಗೌಡ, ವಸಂತ, ತೇಜೋಮೂರ್ತಿ, ದಮ್ಮನಹಳ್ಳಿ ಪಾಲಾಕ್ಷ, ಎಸ್.ಎಂ.ರಘು, ತಮ್ಮಣ್ಣ, ಲೋಕೇಶ್, ರಮೇಶ್, ಮೈಕಲ್, ಜವರಯ್ಯ, ನಾಗಣ್ಣ, ಶಂಕರೇಗೌಡ, ಡಿ.ದೇವರಾಜು, ವಾಸಿಂ, ಪುನೀತ್, ಗಿರೀಶ್, ಧರ್ಮ, ನವೀನ್, ಶಾಸಕರ ಆಪ್ತ ಸಹಾಯಕ ಮಹದೇವ್, ಉಪನ್ಯಾಸಕರುಗಳಾದ ಎಸ್.ಅಶೋಕ್, ಲಿಂಗರಾಜು, ಆಶಾಮ್ಮ, ನಾಗರತ್ನ, ಗೀತಾ, ಮಹದೇವ, ವಿಜಯನಾಯಕ, ಮಧುಕರ್, ನಾಗರಾಜು, ಪ್ರಿಯಾಂಕ, ವಿದ್ಯಾರ್ಥಿಗಳು ಸೇರಿದಂತೆ ಹಲವರು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.