ನಾಗತಿಹಳ್ಳಿ ಮಂಜುನಾಥ್
ಹೊಸದುರ್ಗ:
ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಸಮಾಜದಲ್ಲಿನ ಕಡೆಗಣಿಸಲ್ಪಟ್ಟ ವರ್ಗಗಳಾದ ವಯೋವೃದ್ಧರು, ಮಹಿಳೆಯರು, ಮಕ್ಕಳು ಹಾಗೂ ಬಡವರಿಗೆ ಬಹುಮುಖ್ಯವಾಗಿವೆ. ಸಾರ್ವಜನಿಕರು ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಬಿ.ಜಿ. ಗೋವಿಂದಪ್ಪ ಸಲಹೆ ನೀಡಿದರು.
ದಿ ರಾಮ್ಕೋ ಸಿಮೆಂಟ್ ಲಿಮಿಟೆಡ್, ಚಿತ್ರದುರ್ಗ ಬಸವೇಶ್ವರ ಮೆಡಿಕಲ್ ಕಾಲೇಜು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ತಾಲ್ಲೂಕಿನ ಮತ್ತೋಡು ಗ್ರಾಮದ ಇಲ್ಕಲ್ ವಜ್ರಪ್ಪ ಸ್ಮಾರಕ ಬಾಳಿಗೊಂದು ಗುರಿ ಸ್ವತಂತ್ರ ಪದವಿಪೂರ್ವ ಕಾಲೇಜು ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ದುಬಾರಿ ಜೀವನದಲ್ಲಿ ದೊಡ್ಡ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವುದು ಅನೇಕರಿಗೆ ಕಷ್ಟಕರವಾಗಿದೆ. ಆರ್ಥಿಕವಾಗಿ ಅಶಕ್ತರಾದವರು ಹೆಚ್ಚಿನ ವೆಚ್ಚ ಭರಿಸಲು ಸಾಧ್ಯವಿಲ್ಲ. ಹೀಗಾಗಿ ಕಾಲಕಾಲಕ್ಕೆ ನಡೆಯುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳಲ್ಲಿ ಚಿಕಿತ್ಸೆ ಪಡೆದು ಆರೋಗ್ಯದ ಕಡೆ ಗಮನ ಹರಿಸುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಮ್ಕೋ ಸಿಮೆಂಟ್ ಲಿಮಿಟೆಡ್ ಕಂಪನಿಯ ಸಹಾಯಕ ಮಹಾ ಪ್ರಬಂಧಕ ಎಂ. ವಿಜ್ಞೇಶ್, ವ್ಯವಸ್ಥಾಪಕ ನಾಗರಾಜ್ ನಾಯ್ಕ್, ಆಡಳಿತ ವೈದ್ಯಾಧಿಕಾರಿ ಮಂಜುನಾಥ್, ಮತ್ತೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ರಾಮ್ಕೋ ಸಿಮೆಂಟ್ ಲಿಮಿಟೆಡ್ ಸಿಬ್ಬಂದಿಗಳು, ಇಲ್ಕಲ್ ವಜ್ರಪ್ಪ ಸ್ಮಾರಕ ಬಾಳಿಗೊಂದು ಗುರಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.