ಚಳ್ಳಕೆರೆಅ.8
ರೈತರು ಸರ್ಕಾರದ ತೊಗರಿ ಬೆಂಬಲ ಬೆಲೆ ಖರೀರಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಅಧಿಕ ಲಾಭ ಪಡೆಯುವ ಮುಯಲಕ ಸರಕಾರಿ ಸೌಲಭ್ಯಗಳ ವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಯೋಗದೊಂದಿಗೆ ಪ್ರಥಮ ಬಾರಿಗೆ ಸಹಕಾರ ಸಂಸ್ಥೆಯೊಂದಿಗೆ ತೊಗರಿ ಬೆಂಬಲ ಬೆಲೆ ಖರೀದಿ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು.
ಬಯಲು ಸೀಮೆಯ ವಾಣಿಜ್ಯ ಬೆಳೆ ಶೇಂಗಾ ಬೆಳೆ ಕುಂಠಿತದಿಂದ ಈ ಬಾರಿ ಈ ಭಾಗದ ರೈತರು ಪ್ರಮುಖ ವಾಣಿಜ್ಯ ಬೆಳೆಯಾಗಿ
ತೊಗರಿ ಬೆಳೆ ಬಿತ್ತನೆ ಮಾಡಿದ್ದು ಅಧಿಕ ಇಳುವರಿ ಪಡೆದು ದ
ಕೇಂದ್ರ ಸರ್ಕಾರವು ರೈತರ ಹಿತ ಕಾಪಾಡಬೇಕು ಎನ್ನುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲಿ ಒಂದಾದ ಮಹತ್ವಾಕಾಂಕ್ಷೆಯ ಯೋಜನೆಯಾದ ತೋಗರಿ ಖರೀದಿ ಕೇಂದ್ರಗಳು ಚಾಲನೆ ನೀಡಿ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ರೈತರ ಖಾತೆಗೆ ಹಣ ಜಮಾ ಮಾಡುವ ಮೂಲಕ ಸರ್ಕಾರ ರೈತರ ನೆರವಿಗೆ ನಿಂತಿದೆ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.










ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯೊಂದಾದ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ತೋಗರಿ ಖರೀದಿಗೆ 7550 ರಾಜ್ಯ ಸರ್ಕಾರದ ಪ್ರೋತ್ಸಾಹ ಧನ 450 ರೂ. ಧನದೊಂದಿಗೆ 8000ರೂ. ಬೆಲೆ ಯಂತೆ ಪ್ರತಿ ಎಕರೆಗೆ 4 ಕ್ವಿಂಟಲ್ ನಂತೆ ಒಬ್ಬ ರೈತರಿಂದ 40 ಕ್ವಿಂಟಲ್ ವರೆಗೆ ತೋಗರಿ ಖರೀದಿಗೆ ಸರ್ಕಾರ ಖರೀದಿಸಲು ಮುಂದಾಗಿದೆ. ರೈತರು ಸರಕಾರದ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಧಿಕಾರಿಗಳಾದ ಗಿರೀಶ್ ಮಾತನಾಡಿದರು.ನಗರಸಭೆ ಉಪಾಧ್ಯಕ್ಷೆ ಸುಮಾ ಭರಮಯ್ಯ, ಸದಸ್ಯರಾದ ರಮೇಶ್ ಗೌಡ, ರಾಘವೇಂದ್ರ,ವೀರಭದ್ರಪ್ಪ. ತಾಲ್ಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ನಗರಸಭೆ ನಾಮ ನಿರ್ದೇಶನ ಸದಸ್ಯರಾದ ಬಡಗಿ ಪಾಪಣ್ಣ,ಕುಶಲ ಕರ್ಮಿಗಳ ವಿಭಾಗದ ರಾಜ್ಯಾಧ್ಯಕ್ಷ ಆರ್ ಪ್ರಸನ್ನಕುಮಾರ್, ಮುಖಂಡರಾದ ಪ್ರಹ್ಲಾದ್ ಇತರರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.