ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ (ಮೈಸೂರು ಜಿಲ್ಲೆ): ಮಕ್ಕಳು ಚೆನ್ನಾಗಿ ಕಲಿತು ಉತ್ತಮ ಪ್ರಜೆಗಳಾಗಿ ರೂಪಗೊಳ್ಳಬೇಕು ಎಂದು
ಕೆನರಾ ಬ್ಯಾಂಕ್ ವ್ಯವಸ್ಥಾಪಕ ಸ್ವಾಮಿ ಹೇಳಿದರು.


ಅವರು ತಾಲೂಕಿನ ಹೆಬ್ಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಹಲವು ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಅವುಗಳನ್ನು ಬಳಸಿಕೊಂಡು ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ವ್ಯಾಸಂಗ ಮಾಡಿ ಉನ್ನತ ಸ್ಥಾನಮಾನಗಳನ್ನು ಅಲಂಕರಿಸಬೇಕು. ಆ ಮೂಲಕ ಹುಟ್ಟಿದ ಊರಿಗೆ, ಕಲಿಸಿದ ಗುರುಗಳಿಗೆ ಹಾಗೂ ತಮ್ಮ ತಂದೆ ತಾಯಿಗಳಿಗೆ ಕೀರ್ತಿಯನ್ನು ತರಬೇಕು ಎಂದರು.
ಶಿಕ್ಷಕ ಬಿ.ಆರ್.ಕುಮಾರ್ ಮಾತನಾಡಿ ಹೆಬ್ಸೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಓದಿ ಈಗ ಉನ್ನತ ಸ್ಥಾನದಲ್ಲಿರುವ ಸ್ವಾಮಿ ಅವರು ತಾವು ಕಲಿತ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಸುಮಾರು 25ಸಾವಿರ ರೂ ಬೆಲೆ ಬಾಳುವ ಟ್ರ್ಯಾಕ್ ಸೂಟ್ಗಳನ್ನು ನೀಡುವ ಮೂಲಕ ವಿದ್ಯಾರ್ಥಿಗಳ ಕಾರ್ಯ ಚಟುವಟಿಕೆಗಳಿಗೆ ಸ್ಪೂರ್ತಿಯಾಗಿದ್ದಾರೆ. ಶಾಲೆಯ ಶಿಕ್ಷಕರುಗಳಿಗೂ ಕೂಡ ಗ್ರಾಮದ ಯುವ ಮುಖಂಡ ಸುನಿಲ್ ಕುಮಾರ್ ಟ್ರ್ಯಾಕ್ ಸೂಟ್ಗಳನ್ನು ನೀಡುವ ಮೂಲಕ ಸರ್ಕಾರಿ ಶಾಲೆಗೆ ಹೆಚ್ಚಿನ ಆದ್ಯತೆ ನೀಡಿ ಗ್ರಾಮದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಇವರ ಈ ಕಾರ್ಯ ಇತರರಿಗೂ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿ ಹಾಗೂ ಶಿಕ್ಷಕರುಗಳಿಗೂ ಟ್ರಾಕ್ ಸೂಟ್ಗಳನ್ನು ವಿತರಣೆ ಮಾಡಿ ದಾನಿಗಳಾದ ಕೆನರಾ ಬ್ಯಾಂಕ್ ವ್ಯವಸ್ಥಾಪಕ ಸ್ವಾಮಿ ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷ ಸುನಿಲ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಕಾಂತರಾಜು, ಶಿಕ್ಷಕರಾದ ಜಯರಾಮೇಗೌಡ, ಕೃಷ್ಣೆಗೌಡ, ಮುಖಂಡ ಸಣ್ಣಯ್ಯ, ಅಡುಗೆ ಸಿಬ್ಬಂದಿ ನಾಗಮ್ಮ, ವಿದ್ಯಾರ್ಥಿಗಳು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.