
ಚಿತ್ರದುರ್ಗ ಜುಲೈ08:
ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟನ್ರ್ಷಿಪ್ ಅವಕಾಶ ಕಲ್ಪಿಸಿದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.
ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 2022-23 ಹಾಗೂ 2023-24ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ತಿಳಿಸಿದ್ದಾರೆ.
ಒಟ್ಟು 24 ಅಭ್ಯರ್ಥಿಗಳಿಗೆ ಇಂಟನ್ರ್ಷಿಪ್ ಅವಕಾಶ ಒದಗಿಸಲಾಗುವುದು. ಅದರ ವಿವರ ಹೀಗಿದೆ. ಮಹಿಳಾ ಆಯವ್ಯಯದಡಿ 10 ಮಹಿಳೆಯರು, ಪರಿಶಿಷ್ಟ ಜಾತಿ ಉಪಯೋಜನೆಯಡಿ 10 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟನ್ರ್ಷಿಪ್‍ಗೆ ಅವಕಾಶ ಕಲ್ಪಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟನ್ರ್ಷಿಪ್‍ಗೆ ಅವಕಾಶ ಕಲ್ಪಿಸಲಾಗುವುದು. ಇಂಟನ್ರ್ಷಿಪ್‍ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000/- ರೂ. ಸ್ಟೈಪೆಂಡ್ ನೀಡಲಾಗುವುದು.
ಅಭ್ಯರ್ಥಿಗಳು ತಮ್ಮ ಸ್ವವಿವರ (Curriculum Vitae) ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/UgNqDcFs1v6akyAD9 ರಲ್ಲಿ ಅರ್ಜಿ ಸಲ್ಲಿಸುವುದು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ. ಅರ್ಜಿ ಸಲ್ಲಿಸಲು 2025ರ ಜುಲೈ 25 ಕೊನೆಯ ದಿನವಾಗಿದೆ. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
ಪತ್ರಕರ್ತರಿಗೆ ಕನ್ನಡ ಸಾಹಿತ್ಯ: ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನ
ಕನ್ನಡ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ ಮೂರು ದಿನಗಳ ಅಧ್ಯಯನ ಶಿಬಿರವನ್ನು ಆಗಸ್ಟ್ 3ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿಯಿರುವ 20 ರಿಂದ 40 ವರ್ಷ ವಯಸ್ಸುಳ್ಳ ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರು, ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ಆಸಕ್ತಿಯುಳ್ಳವರು ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜುಲೈ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್ https://sahithyaacademy.karnataka.gov.in ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಎನ್.ಕರಿಯಪ್ಪ ತಿಳಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.