
ಹಿರಿಯೂರು:
ರಾಜ್ಯ ಸರ್ಕಾರ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲಾಗುತ್ತಿದ್ದು, ಇದರಿಂದ ಗ್ರಾಮೀಣ ಭಾಗದ ಸಾರಿಗೆ ಸೌಕರ್ಯ ಅಭಿವೃದ್ಧಿ ಹೊಂದಿ ಗ್ರಾಮೀಣ ರಸ್ತೆಗಳು ಶೀಘ್ರವೇ ಪ್ರಗತಿ ಪಥಗಳಾಗಿ ಬದಲಾಗಲಿವೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಹೇಳಿದರು.
ತಾಲ್ಲೂಕಿನ ಹೊಸದುರ್ಗ ಗಡಿ ಭಾಗವಾದ ಬೆಳಗಟ್ಟ-ಭರಮಗಿರಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು.
ಗ್ರಾಮೀಣ ಸಂಪರ್ಕ ರಸ್ತೆ , ಶಿಕ್ಷಣ, ನೀರಾವರಿ, ಕುಡಿಯುವ ನೀರು, ವಿದ್ಯುತ್, ಆರೋಗ್ಯ ಇತರ ಮೂಲ ಸೌಲಭ್ಯ ಅಭಿವೃದ್ಧಿಯಿಂದ ಮಾತ್ರ ಹಳ್ಳಿಗಳು ಪ್ರಗತಿ ಪಥದಲ್ಲಿ ಸಾಗಲು ಸಾದ್ಯಕವಾಗುತ್ತದೆ. ನಮ್ಮ ಕಾಂಗ್ರೆಸ್ ಸರ್ಕಾರ ಗ್ರಾಮೀಣ ರಸ್ತೆ ಸೌಕರ್ಯವನ್ನು ಸುಧಾರಿಸಲು ಗುರಿ ಹೊಂದಲಾಗಿದೆ. ಎಂದರಲ್ಲದೆ,
ರಸ್ತೆ ಅಭಿವೃದ್ದಿಾ ಜೊತೆಗೆ ಮೈಸೂರು ಅರಸರ ಕಾಲದಲ್ಲಿ ನಿರ್ಮಾಣವಾದ ಸೇತುವೆಗಳ ದುರಸ್ತಿ, ಸುರಕ್ಷತೆಗೆ ವಿಶೇಷ ಆದ್ಯತೆ ನೀಡಲಾಗುವುದು. ವೇದಾವತಿ ನದಿ ಪಾತ್ರದಲ್ಲಿ ಸರಣಿ ಚೆಕ್ ಡ್ಯಾಂ ನಿರ್ಮಾಣದಿಂದ ಅಂತರ್ಜಲ ವೃದ್ದಿಗಯಾಗಿ ಕೃಷಿ, ಕುಡಿಯುವ ನೀರಿಗೆ ವರದಾನವಾಗಿದೆ ಎಂಬುದಾಗಿ ಅವರು ಹೇಳಿದರು.
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚಗ್ಯಾರಂಟಿ ಯೋಜನೆಗೆ ಅಭೂತಪೂರ್ವ ಜನಬೆಂಬಲ ವ್ಯಕ್ತವಾಗಿದೆ. ಯಾವುದೇ ಕಾರಣಕ್ಕೂ ಸ್ಥಗಿತವಾಗುವುದಿಲ್ಲ ಎಂಬುದಾಗಿ ಸಿ.ಎಂ.ಸಿದ್ಧರಾಮಯ್ಯ ಅವರು ವ್ಯಕ್ತಪಡಿಸಿದ್ದು, ಇದು ಕಾಂಗ್ರೆಸ್ ಸರ್ಕಾರದ ಬದ್ಧತೆಯಾಗಿದೆ. ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವ, ಸಾಮಾಜಿಕ ನ್ಯಾಯ ಸಿದ್ದಾಂತದ ಮೂಲಕ ಜನಸ್ನೇಹಿ ಯೋಜನೆ ಅನುಷ್ಠಾನಗೊಳಿಸಿದೆ ಎಂಬುದಾಗಿ ಅವರು ಹೇಳಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್, ನಗರಸಭೆ ಮಾಜಿ ಅಧ್ಯಕ್ಷರಾದ ಟಿ.ಚಂದ್ರಶೇಖರ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮುಕುಂದ, ದಿಂಡಾವರ ಮಹೇಶ್, ಜ್ಞಾನೇಶ್, ಕಲ್ಲಹಟ್ಟಿ ಹರೀಶ್, ಗುರುಪ್ರಸಾದ್, ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.