July 8, 2026
IMG20260213141655_01

oplus_0


ಚಳ್ಳಕೆರೆ, ಜು.8: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (SIR)-2026ರ ಅಂಗವಾಗಿ ನಂ.98 ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಮನೆ-ಮನೆ ಭೇಟಿ ಕಾರ್ಯವು ಜೂನ್ 30ರಿಂದ ಜುಲೈ 29ರವರೆಗೆ ನಡೆಯುತ್ತಿದೆ.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 260 ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ತೆರಳಿ ಮತದಾರರ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದು, ಜುಲೈ 8ರವರೆಗೆ ಒಟ್ಟು 2,25,619 ಮತದಾರರ ಪೈಕಿ 2,24,941 ಗಣತಿ ನಮೂನೆಗಳನ್ನು ವಿತರಿಸಲಾಗಿದೆ. ಇದರಲ್ಲಿ 56,604 ನಮೂನೆಗಳ ಗಣಕೀಕರಣ ಪೂರ್ಣಗೊಂಡಿದೆ.
ಪರಿಷ್ಕರಣೆ ವೇಳೆ 147 ಮರಣ ಪ್ರಕರಣಗಳು, 125 ಶಾಶ್ವತ ವಲಸೆ ಹೋದವರು, 58 ಡಬಲ್ ಎಂಟ್ರಿಗಳು ಹಾಗೂ 3 ಗೈರು ಹಾಜರಿ ಪ್ರಕರಣಗಳು ದಾಖಲಾಗಿವೆ.
ಮತದಾರರು ತಮ್ಮ ಹೆಸರು, ವಿಳಾಸ ಹಾಗೂ ಇತರೆ ವಿವರಗಳನ್ನು ಪರಿಶೀಲಿಸಿ, ಯಾವುದೇ ತಿದ್ದುಪಡಿ ಅಗತ್ಯವಿದ್ದಲ್ಲಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿ ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ತಾಲೂಕು ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ರೇಹಾನ್ ಪಾಷ ಈ ಮಾಹಿತಿ ನೀಡಿದ್ದು, ಮತದಾರರ ಪಟ್ಟಿಯನ್ನು ಶುದ್ಧ ಮತ್ತು ನಿಖರವಾಗಿಸಲು ಸಾರ್ವಜನಿಕರು ಚುನಾವಣಾ ಸಿಬ್ಬಂದಿಗೆ ಸಹಕಾರ ನೀಡುವಂತೆ ಕೋರಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading