July 8, 2026
IMG-20260708-WA0254



ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಭಾರತೀಯ ಜನತಾ ಪಕ್ಷ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಕೆ.ಟಿ. ಕುಮಾರಸ್ವಾಮಿ ಅವರ ಆದೇಶದಂತೆ, ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಟಿ. ಶಿವದತ್ತ ಅವರನ್ನು ಚಿತ್ರದುರ್ಗ ಜಿಲ್ಲಾ ಬಿಜೆಪಿ ಎಸ್‌ಸಿ ಮೋರ್ಚಾ ಸಮಿತಿಯ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಚಿತ್ರದುರ್ಗ ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷರಾದ ಮುದ್ದಾಪುರ ಕೆ.ಎಂ. ಪರಶುರಾಮ್ ಅವರು, ಪಕ್ಷ ಸಂಘಟನೆ ಬಲವರ್ಧನೆ ಹಾಗೂ ಎಸ್‌ಸಿ ಮೋರ್ಚಾದ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವ ಉದ್ದೇಶದಿಂದ ಈ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ನೂತನ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಟಿ. ಶಿವದತ್ತ ಅವರಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading