ಹಿರಿಯೂರು:
ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳು ಸಂಘದ ರಾಜ್ಯ ಘಟಕದ ಅಧ್ಯಕ್ಷರಾಗಿರುವ ಷಡಕ್ಷರಿ ಅವರ ಗಮನದಲ್ಲಿವೆ. ಮುಂದಿನ ದಿನಗಳಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ನೂರಕ್ಕೆ ನೂರರಷ್ಟು ಪ್ರಯತ್ನ ನಡೆಸಲಿದ್ದಾರೆ. ಅವರ ಕೈ ಬಲಪಡಿಸುವ ಕೆಲವನ್ನು ಎಲ್ಲರೂ ಮಾಡೋಣ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ರಮೇಶ್ ಎಂಬುದಾಗಿ ಅವರು ಹೇಳಿದರು.
ನಗರದ ನೌಕರರ ಭವನದಲ್ಲಿ ಬುಧವಾರದಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಶಾಖೆ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಗಳ ಸಹಯೋಗದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳ ಕುರಿತು ಚರ್ಚಿಸಲು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪ್ರಾಥಮಿಕ ಶಾಲಾ ಶಿಕ್ಷಕರು 28 ವರ್ಷ ಒಂದೇ ಹುದ್ಧೆಯಲ್ಲಿ ಸೇವೆ ಸಲ್ಲಿಸಿದರೂ ಯಾವುದೇ ಬಡ್ತಿ ಇಲ್ಲ. 2016ಕ್ಕಿಂತ ಪೂರ್ವದಲ್ಲಿ ನೇಮಕವಾದ ಶಿಕ್ಷಕರು 1ರಿಂದ 7 ನೇ ತರಗತಿಗೆ ನೇಮಕವಾದರೂ ಅವರಿಗೆ 1ರಿಂದ 5 ಎಂಬುದಾಗಿ ಹಿಂಬಡ್ತಿ ನೀಡಲಾಗಿದೆ ಎಂಬುದಗಿ ಅವರು ಅಸಮಧಾನ ಹೊರಹಾಕಿದರು.
2006ರಿಂದ ಈಚೆಗೆ ನೇಮಕವಾದ ಶಿಕ್ಷಕರಿಗೆ ಹಳೆ ಪಿಂಚಣಿ ಅನ್ವಯಿಸದೆ ಹೊಸ ಪಿಂಚಣಿ ಜಾರಿ ಮಾಡಲಾಗಿದೆ. ಶಿಕ್ಷಕರಿಗೆ ಸಕಾಲದಲ್ಲಿ ವರ್ಗಾವಣೆ ಭಾಗ್ಯವೂ ಇಲ್ಲವಾಗಿದೆ. ಹೆಚ್ಚುವರಿ ಶಿಕ್ಷಕರನ್ನು ಗುರುತಿಸಿ ಬೇರೆ ತಾಲ್ಲೂಕುಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ, ಇಂತಹ ಮಲತಾಯಿ ಧೋರಣೆಗೆ ಕಡಿವಾಣ ಹಾಕಬೇಕು ಎಂಬುದಾಗಿ ಶಿಕ್ಷಕರ ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ನಡೆಸುವ ಹೋರಾಟಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಬಲ ನೀಡಬೇಕು ಎಂಬುದಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಆಗ್ರಹಿಸಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳ ಬಗ್ಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಮಹೇಶ್ವರವರು ವಿವರಿಸಿದರು. ಈ ಸಭೆಯಲ್ಲಿ ಸರ್ಕಾರಿ ನೌಕರರ ಸಂಘದ ಖಜಾಂಚಿ ಬಿ.ಆರ್.ಶ್ರೀನಿವಾಸ್, ಕಾರ್ದರ್ಶಿ ಗಿರೀಶ್, ರಾಜ್ಯ ಪರಿಷತ್ ಸದಸ್ಯ ಶಿವಕುಮಾರ್, ಆಗಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ರಮೇಶ್ ನಾಯಕ್, ಸಹ ಕಾರ್ಯದರ್ಶಿ ಶಿವಮೂರ್ತಿ, ಸಂಘಟನಾ ಕಾರ್ಯದರ್ಶಿ ಹನುಮಂತರೆಡ್ಡಿ, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಅನಿಲ್ ಕುಮಾರ್, ನರಸಿಂಹಮೂರ್ತಿ, ಕೆ.ಸಿ.ರಮೇಶ್, ವೀರೇಶ್, ಮಧುಸೂಧನ್, ವೆಂಕಟೇಶ್, ಮಹಂತೇಶ್, ಜಗದೀಶ್ ಯಾದವ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.