ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮಪಂಚಾಯಿತಿ ಕಚೇರಿಯಲ್ಲಿ ಸರಕಾರಿ ಗೋಮಾಳ ಜಮೀನನ್ನು ಖಾಸಗಿ ಆಸ್ತಿಯಂತೆ ಹಂಚಿಕೊಂಡಿರುವ ಗಂಭೀರ ಹಾಗೂ ವ್ಯವಸ್ಥಿತ ಅಕ್ರಮ ಬೆಳಕಿಗೆ ಬಂದಿದೆ.












ಸರಕಾರಿ ಗೋಮಾಳದ ದೃಶ್ಯ
ಗೋಮಾಳ ಭೂಮಿಯಲ್ಲಿ ನಿಯಮಬಾಹಿರವಾಗಿ ವಸತಿ ನಿವೇಶನಗಳಾಗಿ ಗ್ರಾಮಪಂಚಾಯಿತಿ ಸದಸ್ಯರ ಸಂಬಂಧಿಕರು ಹಾಗೂ ಪಂಚಾಯಿತಿ ಸಿಬ್ಬಂದಿಗಳ ಕುಟುಂಬ ಸದಸ್ಯರ ಹೆಸರಿನಲ್ಲಿ ಅಕ್ರಮವಾಗಿ ಖಾತೆ ಮಾಡಲಾಗಿದೆ ಎಂಬ ಗಂಭೀರ ಆರೋಪಗಳು ಸ್ಫೋಟಗೊಂಡಿವೆ.






ಒಂದೇ ನಿವೇಶನ ಇಬ್ಬರಿಗೆ ಖಾತೆ -ಖ್ಯಾತೆ ಠಾಣೆಯವರೆಗೆ
ಹಗರಣದ ಗಂಭೀರತೆ ಇನ್ನಷ್ಟು ಹೆಚ್ಚಿಸುವಂತೆ, ಒಂದೇ ನಿವೇಶನವನ್ನು ಇಬ್ಬರಿಗೆ ಅಕ್ರಮವಾಗಿ ಖಾತೆ ಮಾಡಿರುವ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಇದು ಪಂಚಾಯಿತಿ ಮಟ್ಟದಲ್ಲಿ ನಡೆದಿರುವ ಅಕ್ರಮಗಳ ವ್ಯಾಪ್ತಿ ಎಷ್ಟು ಆಳವಾಗಿದೆ ಎಂಬುದಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ.
ಆಶ್ಚರ್ಯಕರ ಸಂಗತಿಯೆಂದರೆ, ಈ ಅಕ್ರಮಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಿ ಅಕ್ರಮ ಖಾತೆ ಮಾಡಿದವರ ವಿರುದ್ದ ತಾಲೂಕು ಕಚೇರಿಯಿಂದ ಕ್ರಮ ಕೈಗೊಳ್ಳುವಂತೆ ಅಧಿಕೃತ ಪತ್ರ ಬಂದಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಇದುವರೆಗೂ ಮೌನ ವಹಿಸಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಮೌನವೇ ಅಕ್ರಮ ಖಾತೆದಾರರಿಗೆ ಹಾಗೂ ಆರೋಪಿತರಿಗೆ ಪರೋಕ್ಷ ರಕ್ಷಣೆ ನೀಡಲಾಗುತ್ತಿದೆಯೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಉದ್ಭವಿಸಿದೆ.
ಸರಕಾರಿ ಗೋಮಾಳ ಜಮೀನು ಲೂಟಿ ಪ್ರಕರಣದಲ್ಲಿ ಜಿಲ್ಲಾಡಳಿತ ತಕ್ಷಣವೇ ಮಧ್ಯಪ್ರವೇಶಿಸಿ, ಅಕ್ರಮವಾಗಿ ನೀಡಿರುವ ಎಲ್ಲಾ ಖಾತೆಗಳನ್ನು ರದ್ದುಪಡಿಸಿ, ಅಧಿಕಾರ ದುರುಪಯೋಗ ಹಾಗೂ ವಂಚನೆಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಗ್ರಾಮಸ್ಥರು ಹಾಗೂ ಸಾರ್ವಜನಿಕರು ತೀವ್ರವಾಗಿ ಆಗ್ರಹಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.
