ಹೊಸದುರ್ಗ:
ಹಿಂದು ಸಂಗಮ ಆಯೋಜನ ಸಮಿತಿಯ ಅಧ್ಯಕ್ಷರಾಗಿ ಪಟ್ಟಣದ ಎಸ್. ನಿಜಲಿಂಗಪ್ಪ ಶೈಕ್ಷಣಿಕ ಸಂಸ್ಥೆಯ ಕಾರ್ಯದರ್ಶಿ ಕೆ.ಎಸ್. ಕಲ್ಮಠ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಿಂದು ಸಂಗಮ ಆಯೋಜನ ಸಮಿತಿಯ ವತಿಯಿಂದ ತಾಲೂಕಿನಲ್ಲಿ ಇದೇ ಜನವರಿ ತಿಂಗಳಲ್ಲಿ ತಾಲೂಕಿನ ವಿವಿಧ ಪ್ರಮುಖ ಸ್ಥಳಗಳು ಹಾಗೂ ಪಂಚಾಯಿತಿ ವ್ಯಾಪ್ತಿಗಳಲ್ಲಿ ನಡೆಯಲಿರುವ ಹಲವು ಕಾರ್ಯಕ್ರಮಗಳ ಆಯೋಜನೆಗೆ ಅವರು ನೇತೃತ್ವ ವಹಿಸಲಿದ್ದಾರೆ.
ಈ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ನಿಟ್ಟಿನಲ್ಲಿ ಪಟ್ಟಣದ ನಿಜಲಿಂಗಪ್ಪ ಶಾಲೆಯ ಸಮೀಪದ ಪ್ರಥಮಶೆಟ್ಟಿ ಲೇಔಟ್‌ನಲ್ಲಿ ಶುಕ್ರವಾರ ಬೆಳಿಗ್ಗೆ ಧ್ವಜಾರೋಹಣ ಪೂಜೆ ಹಾಗೂ ಭೂಮಿ ಪೂಜೆಯನ್ನು ವಿಧಿವಿಧಾನಗಳೊಂದಿಗೆ ನೆರವೇರಿಸಲಾಯಿತು.
About The Author
Discover more from JANADHWANI NEWS
Subscribe to get the latest posts sent to your email.