ಸಿದ್ದಾಪುರ ಗ್ರಾಮದಲ್ಲಿ ಗ್ರಾಮ ಆರೋಗ್ಯ–ನೈರ್ಮಲ್ಯ–ಪೌಷ್ಟಿಕ ಸಮಿತಿ ಸಭೆ
ಚಳ್ಳಕೆರೆ: ತಾಲೂಕಿನ ಸಿದ್ದಾಪುರ ಗ್ರಾಮದ ಅಂಗನವಾಡಿ ಬಿ ಕೇಂದ್ರದಲ್ಲಿ ಗ್ರಾಮ ಆರೋಗ್ಯ, ನೈರ್ಮಲ್ಯ ಹಾಗೂ ಪೌಷ್ಟಿಕ ಸಮಿತಿ (VHNSC) ಸಭೆ ನಡೆಯಿತು. ಸಭೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಗಳಮ್ಮ ರಂಗಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದರು.
ಈ ವೇಳೆ ಅವರು ಮಾತನಾಡಿ, ಗ್ರಾಮದಲ್ಲಿ ಆರೋಗ್ಯ ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಗರ್ಭಿಣಿ ಮಹಿಳೆಯರು, ತಾಯಿ–ಮಗು ಆರೋಗ್ಯ ಹಾಗೂ ಮಕ್ಕಳ ಪೌಷ್ಟಿಕ ಆಹಾರಕ್ಕೆ ಹೆಚ್ಚಿನ ಗಮನ ನೀಡಬೇಕು ಎಂದು ಹೇಳಿದರು.
ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಆರೋಗ್ಯ ಸಂಬಂಧಿತ ಸರ್ಕಾರಿ ಯೋಜನೆಗಳ ಮಾಹಿತಿ ನೀಡಿ, ಅವುಗಳ ಸದುಪಯೋಗ ಪಡೆದುಕೊಳ್ಳುವಂತೆ ಗ್ರಾಮಸ್ಥರಿಗೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಟಿಕತೆಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚೆಯಲ್ಲಿ ಭಾಗಿಯಾದರು.
About The Author
Discover more from JANADHWANI NEWS
Subscribe to get the latest posts sent to your email.