January 29, 2026
n655214328174150503413848c8a08b9c70b1e0314787d527358551c669a091c9000a42f9db191eb8ca190b.jpg

ಚಿತ್ರದುರ್ಗ ಮಾ.9 ಲಾರಿ ಕಾರು ಡಿಕ್ಕಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಚಿತ್ರದುರ್ಗ  ನಗರದ ಹೊರವಲಯದ ಹೊಸ ಹೈವೆಯಲ್ಲಿ ಇಂದು ಬೆಳಿಗ್ಗೆ 11 : 30 ರ ಸುಮಾರಿಗೆ ಮೆದೇಹಳ್ಳಿ ಮತ್ತು ಗುಡ್ಡದರಂಗವ್ವನಹಳ್ಳಿಯ ಮಧ್ಯೆ ಐರಾವತ ಹೋಟೆಲ್ ಸಮೀಪ ಎಡಬದಿಯಲ್ಲಿ ಚಲಿಸುತ್ತಿದ್ದ ಲಾರಿಗೆ ಇನ್ನೋವಾ ವಾಹನ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಇನ್ನೋವಾ ಕಾರು ವೇಗವಾಗಿ ಬಂದು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದ ಆರು ಮಂದಿಯ ಪೈಕಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಪ್ರಯಾಣಿಕನಿಗೆ ಗಾಯಗಳಾಗಿದ್ದು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading