ವರದಿ: ಶಿವಮೂರ್ತಿ ನಾಯಕನಹಟ್ಟಿ
ನಾಯಕನಹಟ್ಟಿ : ಪಟ್ಟಣದ ಸಮೀಪದಲ್ಲಿರುವ ಚಿಕ್ಕಕೆರೆ ಕೋಡಿ ನೀರು ಹರಿವ ಸ್ಥಳದಲ್ಲಿ ಕಾಲುವೆ ಕಾಮಗಾರಿಯನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲವೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.





ಒಂದು ವಾರದಲ್ಲಿ ಶ್ರೀ ಗುರು ತಿಪ್ಪೇರುದ್ರಸ್ವಾಮಿಯ ಜಾತ್ರಾ ಮಹೋತ್ಸವ ಇರುವುದರಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಹಾಕಿಕೊಂಡು ವ್ಯಾಪಾರ ವ್ಯಾಪಾರ ಮಾಡುವುದರಿಂದ ಜಗಳೂರು ಕಡೆಯಿಂದ ಬರುವ ವಾಹನಗಳು ಚಿಕ್ಕಕೆರೆಯ ಕೋಡಿ ಪಕ್ಕದಿಂದ ಬೈಪಾಸ್ ರಸ್ತೆಯ ಮೂಲಕ ಅಂಬೇಡ್ಕರ್ ಸರ್ಕಲ್ ಮಾರ್ಗವಾಗಿ ಚಳ್ಳಕೆರೆ ಕಡೆಗೆ ಸಂಚರಿಸುತ್ತವೆ. ಕೆಲ ತಿಂಗಳ ಹಿಂದೆ ಸುರಿದ ಮಳೆಯಿಂದ ಚಿಕ್ಕಕೆರೆ ಭರ್ತಿಯಾಗಿ ಕೋಡಿ ಬಿದ್ದಿತ್ತು.
ಕೋಡಿ ನೀರು ಹರಿವ ಸ್ಥಳದಲ್ಲಿ ಕಾಲುವೆ ನಿರ್ಮಿಸಿದರೆ ಮುಂದೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ಶಾಸಕರ ಅನುದಾನದಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಕಾಮಗಾರಿಯನ್ನು ಪಡೆದ ಗುತ್ತಿಗೆದಾರ ಕಾಮಗಾರಿಯನ್ನು ಪೂರ್ಣಗೊಳಿಸಿ ಸರಿಯಾಗಿ ಕ್ಯೂರಿಂಗ್ ಮಾಡದೆ ಹಾಗೂ ನೀರು ಹರಿವ ಸ್ಥಳಗಳಲ್ಲಿ ಜಾಲರಿ ಕೂಡ ಹಾಕದೆ ಇರುವುದು. ಅದೇ ರಸ್ತೆಯಲ್ಲಿ ವಾಹನಗಳ ಸಂಚರಿಸಲು ಮಣ್ಣಿನ ದಿಬ್ಬಗಳನ್ನು ಸಮತಟ್ಟಗೊಳಿಸಿಲ್ಲವೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
About The Author
Discover more from JANADHWANI NEWS
Subscribe to get the latest posts sent to your email.