April 9, 2026
FB_IMG_1775744278514.jpg

ಚಿತ್ರದುರ್ಗಏ.09:
ವೈಜ್ಞಾನಿಕವಾಗಿ ರಸ್ತೆಗಳ ನಿರ್ವಹಣೆ ಮಾಡುವುದರಿಂದ ಸಾಕಷ್ಟು ರಸ್ತೆ ಅಪಘಾತಗಳನ್ನು ತಡೆಯಬಹುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅವೈಜ್ಞಾನಿಕ ರಸ್ತೆ, ಹಂಪ್‌ಗಳು ಅಪಘಾತಗಳಿಗೆ ಕಾರಣವಾಗುತ್ತವೆ. ಆದ್ದರಿಂದ ಇವುಗಳನ್ನು ಕೂಡಲೇ ಸರಿಪಡಿಸಬೇಕು. ರಸ್ತೆ ಸುರಕ್ಷತೆಗೆ ಪೂರಕವಾದ ಸೂಚನಾ ಫಲಕಗಳನ್ನು ಅಳವಡಿಸಬೇಕು. ಅತಿ ಹೆಚ್ಚು ಅಪಘಾತಗಳು ಸಂಭವಿಸುವ ಸ್ಥಳಗಳನ್ನು ಗುರುತಿಸಿ, ಅಲ್ಲಿ ಅಗತ್ಯ ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳನ್ನು ಅಕ್ರಮವಾಗಿ ಪಾರ್ಕಿಂಗ್ ಮಾಡುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಇಂತಹ ವಾಹನಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಪೊಲೀಸ್ ಉಪಾಧೀಕ್ಷಕರು ಅಫಘಾತಗಳನ್ನು ಇಳಿಮುಖಗೊಳಿಸಲು ತಮ್ಮ ವ್ಯಾಪ್ತಿಯಲ್ಲಿನ ಅಪಘಾತ ವಲಯ ಹಾಗೂ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ, ಅಲ್ಲಿ ಕೈಗೊಳ್ಳಬೇಕಾದ ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗ, ರಾಷ್ಟಿçÃಯ ಹೆದ್ದಾರಿ ಅಧಿಕಾರಿಗಳಿಗೆ ವರದಿಯನ್ನು ಕಳುಹಿಸಿಕೊಡಿ, ಸಂಬAಧ ಪಟ್ಟವರು ರಸ್ತೆ ಸುಧಾರಣೆ ಕ್ರಮ ಕೈಗೊಂಡು ಸಮಿತಿಗೆ ಅನುಪಾಲನೆ ವರದಿ ನೀಡಬೇಕು. ಒಂದು ವೇಳೆ ಸೂಕ್ತ ಕ್ರಮ ಕೈಗೊಳ್ಳದೇ ಅಪಘಾತಗಳು ಸಂಭವಿಸಿದರೆ ಸಂಬAಧ ಪಟ್ಟ ಅಧಿಕಾರಿಯ ವಿರುದ್ದ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲು ಕಾರ್ಯಕ್ರಮ ಆಯೋಜಿಸುವಂತೆ ಸಾರಿಗೆ ಮತ್ತು ಪೊಲೀಸ್ ಇಲಾಖೆಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಅಪಘಾತ ಸಂಭವಿಸಿದ ಕೂಡಲೇ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ಮತ್ತು ತುರ್ತು ಚಿಕಿತ್ಸೆ ದೊರೆಯುವಂತೆ ಆರೋಗ್ಯ ಇಲಾಖೆಯು ಕ್ರಮವಹಿಸಬೇಕು. ರಸ್ತೆ ಸುರಕ್ಷತೆಯು ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ, ಜಿಲ್ಲೆಯಲ್ಲಿ ಸಂಭವಿಸುವ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಮತ್ತು ಅಮೂಲ್ಯವಾದ ಜೀವಗಳನ್ನು ಉಳಿಸಲು ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶಿಸಿದರು.
ಅಪಘಾತಗಳಲ್ಲಿ ಇಳಿಮುಖ : ಬೇಕಿದೆ ಇನ್ನೂ ಹೆಚ್ಚಿನ ಸುಧಾರಣೆ
ಕಳೆದ ಮೂರು ವರ್ಷಗಳಿಗೆ ಹೊಲಿಸಿದರೆ ಜಿಲ್ಲೆಯಲ್ಲಿ ಅಪಘಾತಗಳ ಪ್ರಮಾಣ ಇಳಿಮುಖವಾಗಿದೆ. ಅಪಘಾತಗಳ ಸಂಖ್ಯೆಯನ್ನು ಮತ್ತಷ್ಟು ಕಡಿಮೆ ಮಾಡಲು ಪೊಲೀಸ್ ಇಲಾಖೆಯೊಂದಿಗೆ ಲೋಕೋಪಯೋಗಿ, ಸಾರಿಗೆ ಮತ್ತು ಆರೋಗ್ಯ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ವಿಶೇಷವಾಗಿ ಅಪಘಾತ ಸಂಭವಿಸಿದ ಮೊದಲ ಒಂದು ಗಂಟೆ ಅತ್ಯಂತ ನಿರ್ಣಾಯಕವಾಗಿದ್ದು, ಆರೋಗ್ಯ ಇಲಾಖೆ ತಕ್ಷಣ ಸ್ಪಂದಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸಭೆಯಲ್ಲಿ ತಿಳಿಸಿದರು.
2023 ರಲ್ಲಿ ಒಟ್ಟು 441 ಪ್ರಾಣಾಪಾಯಕಾರಿ ಅಪಘಾತಗಳು ಸಂಭವಿಸಿದ್ದು, 463 ಜನರು ಸಾವನ್ನಪ್ಪಿದ್ದರು. ಒಟ್ಟು 1,110 ಸಾಮಾನ್ಯ ಅಪಘಾತಗಳಲ್ಲಿ 2,600 ಜನರು ಗಾಯಗೊಂಡಿದ್ದರು. 2024 ರಲ್ಲಿ ಪ್ರಾಣಾಪಾಯಕಾರಿ ಅಪಘಾತಗಳ ಸಂಖ್ಯೆ 419ಕ್ಕೆ ಇಳಿಕೆಯಾಗಿದೆ. ಆದರೆ, ಸಾವಿನ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆ ಕಂಡುಬAದಿತ್ತು. ಕಟ್ಟುನಿಟ್ಟಿನ ಕ್ರಮಗಳಿಂದಾಗಿ 2025ರಲ್ಲಿ ಪ್ರಾಣಾಪಾಯಕಾರಿ ಅಪಘಾತಗಳ ಸಂಖ್ಯೆ 384ಕ್ಕೆ ಕುಸಿದಿದೆ. ಅಂದರೆ ಸುಮಾರು 35 ಅಪಘಾತಗಳು ಕಡಿಮೆಯಾಗಿವೆ. ಸಾವಿನ ಸಂಖ್ಯೆಯು 471 ರಿಂದ 425ಕ್ಕೆ ಇಳಿಕೆಯಾಗುವ ಮೂಲಕ ಸುಮಾರು 50 ಜನರ ಜೀವ ಉಳಿಸಲಾಗಿದೆ.
ಅಪಘಾತಗಳ ಸಂಖ್ಯೆ ಇಳಿಕೆಯಾಗಲು ಪೋಲಿಸ್ ಇಲಾಖೆಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಅಪಘಾತಗಳಿಗೆ ಮುಖ್ಯ ಕಾರಣವಾಗುತ್ತಿರುವ ಅಂಶಗಳ ಮೇಲೆ ವಿಶೇಷ ನಿಗಾ ವಹಿಸಲಾಗಿದೆ. ಮದ್ಯಪಾನ ಮಾಡಿ ವಾಹನ ಚಾಲನೆ 2023ರಲ್ಲಿ ಇಡೀ ವರ್ಷಕ್ಕೆ 365 ಪ್ರಕರಣಗಳಿದ್ದರೆ, 2026ರ ಮೊದಲ ಮೂರು ತಿಂಗಳಲ್ಲೇ 321 ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. 1,599 ಅತಿವೇಗದ ಪ್ರಕರಣಗಳನ್ನು ದಾಖಲಿಸಲಾಗಿದೆ. ಬ್ಲ್ಯಾಕ್ ಸ್ಪಾಟ್‌ಗಳ ಗುರುತಿಸುವಿಕೆ, ಹೆಲ್ಮೆಟ್ ಜಾಗೃತಿ, ಪ್ರತಿಫಲಕ ಸ್ಟಿಕ್ಕರ್ ಅಳವಡಿಕೆ, ಡಿಎಲ್ ರದ್ದತಿ ಶಿಫಾರಸು ಮತ್ತು ರಸ್ತೆ ಬದಿಯ ಅಕ್ರಮ ಪಾರ್ಕಿಂಗ್ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಹೇಳಿದರು.
ಅಪಘಾತಗಳ ಮಾಹಿತಿ ತಂತ್ರಾAಶದಲ್ಲಿ ಇಂದ್ರೀಕರಿಸಲು ಸೂಚನೆ:
ರಸ್ತೆ ಅಪಘಾತಗಳ ನಿರ್ವಹಣೆ ಮತ್ತು ಸಂತ್ರಸ್ತರಿಗೆ ತ್ವರಿತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ‘ಸಮಗ್ರ ರಸ್ತೆ ಅಪಘಾತ ದತ್ತಾಂಶ’ (Integrated Road Accident Database – e-DAR) ಎಂಬ ಹೊಸ ತಂತ್ರಜ್ಞಾನ ಆಧಾರಿತ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.ಈ ಯೋಜನೆಯಲ್ಲಿ ಪೊಲೀಸ್, ಆರ್‌ಟಿಓ, ಹೆದ್ದಾರಿ ಪ್ರಾಧಿಕಾರ ಮತ್ತು ಆರೋಗ್ಯ ಇಲಾಖೆಗಳು ಪ್ರಮುಖ ಪಾಲುದಾರರಾಗಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಸಂತ್ರಸ್ತರ ವಿವರ ಮತ್ತು ವಾಹನದ ಮಾಹಿತಿಯನ್ನು ಏಳು ವಿವಿಧ ಫಾರಂಗಳಲ್ಲಿ ದಾಖಲಿಸುತ್ತಾರೆ. ಎಂಜಿನಿಯರಿAಗ್ ಇಲಾಖೆಯು ರಸ್ತೆಯ ದೋಷಗಳು ಅಥವಾ ಅಪಘಾತಕ್ಕೆ ಕಾರಣವಾದ ತಾಂತ್ರಿಕ ಅಂಶಗಳನ್ನು ವಿಶ್ಲೇಷಿಸಿ ವರದಿ ನೀಡುತ್ತದೆ. ಅಪಘಾತವಾದ ತಕ್ಷಣ ಸಂತ್ರಸ್ತರಿಗೆ ಅಂದಾಜು ರೂ. 1.25 ರಿಂದ 1.5 ಲಕ್ಷದವರೆಗೆ ತಕ್ಷಣದ ವಿಮೆ ಸೌಲಭ್ಯ ಸಿಗಲಿದೆ. ಈ ಮಾಹಿತಿಯನ್ನು ಆ್ಯಪ್ ಮೂಲಕವೇ ಆಸ್ಪತ್ರೆಗಳಿಗೆ ರವಾನಿಸಲಾಗುತ್ತದೆ. ದತ್ತಾಂಶದ ಆಧಾರದ ಮೇಲೆ ಅತಿ ಹೆಚ್ಚು ಅಪಘಾತ ನಡೆಯುವ ಪ್ರದೇಶಗಳನ್ನು ಗುರುತಿಸಿ, ಅಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಈ ವ್ಯವಸ್ಥೆ ಸಹಕಾರಿಯಾಗಲಿದೆ. ಮುಂದಿನ ದಿನಗಳಲ್ಲಿ ಈ ವ್ಯವಸ್ಥೆಯನ್ನು ನ್ಯಾಯಾಲಯಗಳೊಂದಿಗೂ ಜೋಡಿಸಲಾಗುವುದು, ಇದರಿಂದ ವಿಮೆ ಇತ್ಯರ್ಥ ಪ್ರಕ್ರಿಯೆ ಮತ್ತಷ್ಟು ವೇಗವಾಗಲಿದೆ. ಈ ಯೋಜನೆಯು 2021 ರಿಂದಲೇ ಚಾಲನೆಯಲ್ಲಿದ್ದು, ಈಗ ಇದನ್ನು ಎಲ್ಲಾ ಇಲಾಖೆಗಳ ಸಹಯೋಗದೊಂದಿಗೆ ಕಟ್ಟುನಿಟ್ಟಾಗಿ ಜಾರಿಗೆ ತರಲು ಸೂಚಿಸಲಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪ್ರತಿಯೊಬ್ಬ ಅಧಿಕಾರಿ ಸರಿಯಾದ ಸಮಯಕ್ಕೆ ದತ್ತಾಂಶ ದಾಖಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದರು.
ಅಕ್ರಮ ಆಟೋಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ನಿರ್ದೇಶನ:
ಪರವಾನಿಗೆ ಪಡೆಯದೇ ಹಾಗೂ ನೊಂದಣಿ ಇಲ್ಲದೇ ಸಂಚರಿಸುತ್ತಿರುವ ಆಟೋ ರಿಕ್ಷಾಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. 20 ವರ್ಷಗಳ ಮೇಲ್ಪಟ್ಟ ಮೈನ್ಸ್ ಲಾರಿಗಳು ಓಡಾಟ ಈಗಾಗಲೇ ನಿರ್ಬಂಧಿಸಲಾಗಿದ್ದು, ಒಂದು ವೇಳೆ ಇಂತಹ ಲಾರಿಗಳು ಸಂಚಾರ ಮಾಡಿದರೆ ಅಂತಹ ವಾಹನಗಳನ್ನು ಸೀಜ್ ಮಾಡಬೇಕು. ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಟ್ಯಾಕ್ಟರ್-ಟ್ರಾö್ಯಲಿಗಳಿಗೆ ರೇಡಿಯಂ ಸ್ಟಿಕ್ಕರ್ ಅಳವಡಿಕೆ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಪ್ರಸ್ತುತ 7,993 ಆಟೋಗಳಿಗೆ ಅಧಿಕೃತ ಪರವಾನಗಿ ನೀಡಲಾಗಿದೆ. ಆದರೆ, ಒಟ್ಟು ನೋಂದಾಯಿತ ಆಟೋಗಳ ಸಂಖ್ಯೆ 10,223 ರಷ್ಟಿದ್ದು, ಸುಮಾರು 2,230 ಆಟೋಗಳು ಪರವಾನಗಿ ಇಲ್ಲದೆ ರಸ್ತೆಗಿಳಿಯುತ್ತಿರುವುದು ಗಮನಕ್ಕೆ ಬಂದಿದೆ. ಪರವಾನಗಿ ಇಲ್ಲದ ಆಟೋಗಳ ಪೈಕಿ ಸುಮಾರು 1,000 ವಾಹನಗಳು ಬೇರೆಡೆಗೆ ಸ್ಥಳಾಂತರವಾಗಿರಬಹುದು ಅಥವಾ ನೋಂದಣಿ ರದ್ದಾಗಿರಬಹುದು ಎಂದು ಅಂದಾಜಿಸಲಾಗಿದೆ. ಆದಾಗ್ಯೂ, ಇನ್ನುಳಿದ ಒಂದು ಸಾವಿರಕ್ಕೂ ಅಧಿಕ ಆಟೋಗಳು ಕಾನೂನುಬಾಹಿರವಾಗಿ ಸಂಚರಿಸುತ್ತಿದ್ದು, ಇವುಗಳ ವಿರುದ್ಧ ತಕ್ಷಣವೇ ಜಂಟಿ ಕಾರ್ಯಾಚರಣೆ ನಡೆಸಲಾಗುವುದು. ಜಿಲ್ಲೆಯಲ್ಲಿ 25 ಸಾವಿರಕ್ಕೂ ಹೆಚ್ಚು ಟ್ಯಾಕ್ಟರ್‌ಗಳಿದ್ದು, ಆಂದೋಲದನದ ಮೂಲಕ 2500 ಟ್ಯಾಕ್ಟರ್‌ಗಳಿಗೆ ಮಾತ್ರ ರೇಡಿಯಂ ಸ್ಟಿಕ್ಕರ್ ಅಳವಡಿಕೆ ಮಾಡಲಾಗಿದ್ದು, ಎಲ್ಲ ಟ್ಯಾಕ್ಟರ್‌ಗಳಿಗೆ ರೇಡಿಯಂ ಸ್ಟಿಕ್ಕರ್ ಅಳವಡಿಕೆ ಆಂದೋಲನ ಮುಂದುವರಿಸುವುದಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ ಕಾಳೆಸಿಂಘೆ ಸಭೆಯಲ್ಲಿ ಮಾಹಿತಿ ನೀಡಿದರು.
ಇದೇ ವೇಳೆ ಚಿತ್ರದುರ್ಗ ನಗರದಲ್ಲಿ ಟ್ರಾಫಿಕ್ ಸಿಗ್ನಲ್‌ಗಳ ನಿರ್ವಹಣೆ, ರಬ್ಬರ್ ಹಂಪ್ಸ್, ಸಿ.ಸಿ. ಟಿವಿ ಕ್ಯಾಮೆರಾ ಅಳವಡಿಸಿಕೆ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಂಡು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಕೃಷ್ಣ ಸರ್ಕಲ್ ವೇಗ ನಿಯಂತ್ರಕಗಳನ್ನು ಅಳವಡಿಸಲು ಸೂಚನೆ:
ಹೊಳಲ್ಕೆರೆ ರಸ್ತೆಯಲ್ಲಿನ ಕೃಷ್ಣ ಸರ್ಕಲ್ ಅವೈಜ್ಞಾನಿಕವಾಗಿದ್ದು, 3 ರಸ್ತೆಗಳು ಸಂಗಮಿಸುತ್ತಿದ್ದು, ಅಪಘಾತ ಕಾರಣವಾಗಬಹುದು. ಇದರೊಂದಿಗೆ ಮುರುಘಾ ಮಠದ ಬಳಿ ಹಳೆ ಪಿ.ಬಿ.ರಸ್ತೆಗೆ ಸೇರುವ ರಸ್ತೆಯ ಅಪಘಾತ ವಲಯವಾಗಿದೆ. ರಾಷ್ಟಿçÃಯ ಹೆದ್ದಾರಿ ಅಧಿಕಾರಿಗಳು ಕೂಡಲೇ ಇಲ್ಲಿ ವೇಗ ನಿಯಂತ್ರಕಗಳನ್ನು ಅಳವಡಿಸಬೇಕು. ಕೃಷ್ಣ ಸರ್ಕಲ್ ವೃತ್ತವನ್ನು ವೈಜ್ಞಾನಿಕವಾಗಿ ಮರು ನಿರ್ಮಾಣ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ನಾಗರಾಜ್, ಪೊಲೀಸ್ ಉಪಾಧೀಕ್ಷಕರುಗಳಾದ ಅರುಣ್ ನಾಗೇಗೌಡ, ಶಿವಕುಮಾರ್, ಸತ್ಯನಾರಾಯಣ್ ರಾವ್ ಎಂ.ಜಿ ಪೌರಾಯುಕ್ತೆ ಲಕ್ಷಿö್ಮÃ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading