ಚಳ್ಳಕೆರೆ, ಏಪ್ರಿಲ್ 09:
ತಾಲೂಕಿನ ಸಾಣಿಕೆರೆಯ ವೇದ ಪಿಯು ಕಾಲೇಜು 2025–26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ.
ಕಾಲೇಜಿನ ವಿಜ್ಞಾನ ವಿಭಾಗದ ಪಿಸಿಎಂಸಿ ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇ.100ರಷ್ಟು ಫಲಿತಾಂಶ ದೊರೆತಿದ್ದು, ಪಿಸಿಎಂಬಿ ವಿಭಾಗದಲ್ಲಿ ಶೇ.99 ಫಲಿತಾಂಶ ದಾಖಲಾಗಿದೆ. ವಿದ್ಯಾರ್ಥಿಗಳ ಈ ಸಾಧನೆ ಕಾಲೇಜಿನ ಶೈಕ್ಷಣಿಕ ಗುಣಮಟ್ಟವನ್ನು ಪ್ರತಿಬಿಂಬಿಸುತ್ತದೆ.
ಈ ಸಾಲಿನ ಪರೀಕ್ಷೆಯಲ್ಲಿ ಗಣಿತದಲ್ಲಿ 5 ವಿದ್ಯಾರ್ಥಿಗಳು, ಕನ್ನಡದಲ್ಲಿ 1 ವಿದ್ಯಾರ್ಥಿ ಹಾಗೂ ಅಕೌಂಟ್ಸ್‌ನಲ್ಲಿ 1 ವಿದ್ಯಾರ್ಥಿ ನೂರಕ್ಕೆ ನೂರು ಅಂಕಗಳನ್ನು ಗಳಿಸಿದ್ದಾರೆ.
ಪಿಸಿಎಂಬಿ ವಿಭಾಗದ ವಿನೋದ್ ಕುಮಾರ್ ಎಸ್.ಆರ್ 584 ಅಂಕಗಳನ್ನು ಪಡೆದು 97.33% ಸಾಧನೆ ಮಾಡಿದರೆ, ವಾಣಿಜ್ಯ ವಿಭಾಗದಲ್ಲಿ ರಂಗಸ್ವಾಮಿ ಆರ್ ಉತ್ತಮ ಸಾಧನೆ ತೋರಿದ್ದಾರೆ.
ಒಟ್ಟು 53 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಹಾಗೂ 69 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಿ.ಟಿ. ರವೀಂದ್ರ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.