September 15, 2025
IMG20250509153611_01.jpg

ಚಳ್ಳಕೆರೆ ಮೇ 9

ಕೃಷಿ ಪರಿಕರಗಳ ಮಾರಾಟಗಾರರು ರೈತ ಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕು. ಅಲ್ಲದೇ, ಮಾರಾಟಗಾರರು ನಿಗದಿಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಅಂತಹವರ ಲೈಸನ್ಸ್‌ ರದ್ದು ಮಾಡಲಾಗುವುದು ಎಂದು ಉಪ ಕೃಷಿ ನಿರ್ದೇಶಕ ಪ್ರಭಾಕರ್ ಹೇಳಿದರು.
ನಗರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಕೃಷಿ ಪರಿಕರ ಮಾರಟಗಾರರ ಸಭೆ ಹಾಗೂ
ಸುರಸ್ಥಿತ ಕೀಟನಾಶಕಗಳ ಬಳಕೆ ಬಗ್ಗೆ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕಳಪೆ ಬಿತ್ತನೆ ಬೀಜ ಗೂಬ್ಬರ ಹಾಗೂ ಕ್ರಿಮಿ ನಾಸಿಕ್ ಔಷಧಿಗಳನ್ನು ಮಾರಾಟ ಮಾಡಿ ರೈತರ ಬೆಳೆ ನಷ್ಟವಾದರೆ ಅಂಗಡಿ ಮಾಲಿಕರು ಮೊದಲ ಆರೋಪಿಗಳಾಗುತ್ತೀರಿ .ನಿಮ್ಮಗೋದಾಮುಗಳನ್ನು ಪರವಾನಿಗೆ ಪಡೆಯಬೇಕು.
ರೈತರಿಗೆ ಗೂತ್ತಾಗುವ ರೀತಿ ನಾಮಪಲಕದ ಮೇಲೆ ದಾಸ್ತಾನು ದೂರ ಪಟ್ಟಿ ಹಾಕ ಬೇಕು ರೈತರಿಗೆ ಕೀಟನಾಶಕಗಳ ಅರಿವು ಮೂಡಿಸುವ ಮೂಲಕ ಔಷಧಿ ವಿತರಣೆ ಮಾಡಬೇಕು ಎಂದು ತಿಳಿಸಿದರು.
ಸಹಾಯಕ ಕೃಷಿ ನಿರ್ದೇಶಕ ಡಾ.ಅಶೋಕ್ ಮಾತನಾಡಿ ರೈತರಿಗೆ ಕಡ್ಡಾಯವಾಗಿ ಖರೀದಿಸಿದ ಕೃಷಿ ಸಾಮಗ್ರಿಗಳಿಗೆ ರಶೀದಿ ನೀಡಲು ಹಾಗೂ ರಸೀದಿಯ ಮೇಲೆ ಸಂಬಂಧಪಟ್ಟ ರೈತರ ಸಹಿ ಪಡೆಯಲು ಸೂಚಿಸಲಾಯಿತಲ್ಲದೆ ಸರಕಾರ ನಿಗದಿಪಡಿಸಿದ ದರದಲ್ಲೇ ಮಾರಾಟ ಮಾಡಬೇಕು ಗೌಪ್ಯವಾಗಿ ರಸಗೊಬ್ಬರಗಳನ್ನು ಸಂಗ್ರಹಿಸಿ, ತಾತ್ಕಾಲಿಕ ಅಭಾವ ಸಷ್ಟಿಸಿ ಹೆಚ್ಚಿನ ದರಗಳಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡುವುದು ಬಿತ್ತನೆ ಬೀಜ ಮಾರಾಟಗಾರರಿಗೆ ಒತ್ತಾಯ ಪೂರ್ವಕವಾಗಿ ಒಂದೇ ಸಂಸ್ಧೆಯ ಬೀಜ ಮಾರಾಟ ಮಾಡದಿರಲು ರೈತರ ಆಯ್ಕೆಗೆ ಅನುಗುಣವಾಗಿ ಬಿತ್ತನೆ ಬೀಜ ಮಾರಾಟ ಯಾವುದೇ ರೀತಿಯ ಬೀಜ ಅಭಾವ ಸೃಷ್ಟಿಸದಿರಲು ಹಾಗೂ ಗೋದಾಮುಗಳ ದಾಸ್ತಾನು ಹಾಗೂ ಲೆಕ್ಕ ಪತ್ರಗಳ ನಿರ್ವಹಣೆ.ನಿಯಮಗಳನ್ನು ಅನುಸರಿಸದಿದ್ದಲ್ಲಿ ಕಾಯಿದೆ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.
ಸಹಾಯಕ ಕೃಷಿ ನಿರ್ದೇಶಕ ಜಾಗೃತ ದಳ ಮಲ್ಲನಗೌಡ ಮಾತನಾಡಿದರು.
ತಾಂತ್ರಿಕ ಕೃಷಿ ಅಧಿಕಾರಿಗಳಾದ ಮೇಘನ.ಗುರುನಂದನ.ಕೃಷಿ ಪರಿಕರಗಳ ಮಾರಾಟ ಸಂಘದ ಅಧ್ಯಕ್ಷ ಜಗದೀಶ.ಉಪಾಧ್ಯಕ್ಷ ಮಂಜುನಾಥ್ ಇತರರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading