
ಹಿರಿಯೂರು:
ತಾಲ್ಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ ಭದ್ರಾಜಲಾಶಯದಿಂದ ಸರ್ಕಾರ ಹಂಚಿಕೆ ಮಾಡಿರುವ ಎರಡು ಟಿ.ಎಂ.ಸಿ.ನೀರು ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಕುಡಿಯುವ ನೀರಿಗೆ ಸಾಲುವುದಿಲ್ಲ. ಅಲ್ಲದೆ ಕೃಷಿ ಚಟುವಟಿಕೆಗೆ ನೀರಿಲ್ಲದೆ ತೊಂದರೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಭದ್ರಾಜಲಾಶಯದಲ್ಲಿರುವ ಹೆಚ್ಚುವರಿ ನೀರನ್ನು ಹಂಚಿಕೆ ಮಾಡಿಕೊಡಬೇಕು ಎಂಬುದಾಗಿ ನೀರಾವರಿ ಹೋರಾಟಗಾರ ಹಾಗೂ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷರಾದ ಕಸವನಹಳ್ಳಿರಮೇಶ್ ಅವರು ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕಿನ ಕೃಷಿ ಚಟುವಟಿಕೆಗಳಿಗೆ ಮುಂದಿನ ದಿನಗಳಲ್ಲಿ ನೀರಿಲ್ಲದೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಭದ್ರಾ ಜಲಾಶಯದ ಹೆಚ್ಚುವರಿ ನೀರನ್ನು ಸರ್ಕಾರ ಪುನರ್ ಹಂಚಿಕೆ ಮಾಡಿಕೊಡಬೇಕೆಂದು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರಿಗೆ ಮನವಿ ಪತ್ರ ಸಲ್ಲಿಸಿ, ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ನೀರಾವರಿ ಹೋರಾಟ ಸಮಿತಿ ಮುಖಂಡ ಎಚ್.ಆರ್.ತಿಮ್ಮಯ್ಯ ಮಾತನಾಡಿ, ಅತಿ ಶೀಘ್ರದಲ್ಲಿಯೇ ಜಿಲ್ಲೆಯ ಉಸ್ತುವಾರಿ ಸಚಿವರು ಈ ಬಗ್ಗೆ ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಸಂಸದರು ಜನಪ್ರತಿನಿಧಿಗಳು ಹಾಗೂ ರೈತರನ್ನು ಸಭೆ ಸೇರಿಸಿ ನಿರ್ಣಯ ಕೈಗೊಳ್ಳಬೇಕು ಎಂಬುದಾಗಿ ಅವರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ನೀರಾವರಿ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಆಲೂರು ಸಿದ್ದರಾಮಣ್ಣ, ಉಪಾಧ್ಯಕ್ಷರಾದ ಎಂ.ಎಂ.ಎಂ. ಮಣಿ, ನಿರ್ದೇಶಕರಾದ ಆರ್. ಕೆ. ಗೌಡ, ನಾರಾಯಣ ಆಚಾರ್, ಖಜಾಂಚಿ ಬಬ್ಬೂರು ಸುರೇಶ್, ರಾಮಚಂದ್ರ ಕಸವನಹಳ್ಳಿ, ರಾಜ್ಯ ರೈತ ಸಂಘದ ಮುಖಂಡರಾದ ಕೆ.ಸಿ.ಹೊರಕೇರಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.