ವರದಿ:ನಾಗತಿಹಳ್ಳಿಮಂಜುನಾಥ್
ಹೊಸದುರ್ಗ: ವಿದ್ಯಾರ್ಥಿಗಳು ಕ್ರಿಯಾಶೀಲತೆಯಿಂದ ಕಲಿತಾಗ ಎಂಥ ಸಾಧನೆಯನ್ನು ಆದರೂ ಮಾಡಬಹುದು ಎಂದು ಬೆಂಗಳೂರಿನ ಅಕ್ಷರ ಚಪ್ಪರ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆಯ ಗೌರವಾಧ್ಯಕ್ಷ ನಾಗೇಶ್ ಆರ್ ಹೇಳಿದರು.
ಪಟ್ಟಣದ ಶ್ರೀ ತೋಟದ ರಾಮಯ್ಯ ಗೌರಮ್ಮ ಬಾಲಿಕಾ ಪ್ರೌಢಶಾಲೆಯಲ್ಲಿ ನಡೆದ ಶಾಲೆಯಲ್ಲಿ ಕನ್ನಡ – ಕಲಿಕಾ ಅಭಿಯಾನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರೇರಣ ನುಡಿಗಳನ್ನು ಆಡಿದರು.
ವಿದ್ಯಾರ್ಥಿಗಳು ಕನ್ನಡ ಭಾಷೆಯ ಬಗ್ಗೆ ಅಭಿಮಾನವನ್ನು ಇಟ್ಟುಕೊಂಡು ಓದುವ ಬರೆಯುವ ಸಾಮರ್ಥ್ಯವನ್ನು ಉತ್ತಮ ರೀತಿಯಲ್ಲಿ ರೂಡಿಸಿಕೊಳ್ಳಬೇಕು ಎಂದು Ä ಹೇಳಿದರು.
ಇದೇ ಸಂದರ್ಭದಲ್ಲಿ ಅಕ್ಷರ ಚಪ್ಪರ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆಯವರು ವಿದ್ಯಾರ್ಥಿಗಳಿಗೆ ಆಶುಭಾಷಣ ಮತ್ತು ಕನ್ನಡ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಂಸ್ಥೆ ವತಿಯಿಂದ ಪ್ರಮಾಣ ಪತ್ರ ಮತ್ತು ಕನ್ನಡ ಪುಸ್ತಕಗಳನ್ನು ಬಹುಮಾನವನ್ನಾಗಿ ನೀಡಿದರು.
ಕನ್ನಡ ಆಧ್ಯಾಪಕ ಜಿ ಎಸ್ ಗಿರಿಜಾಶಂಕರ್ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಅಕ್ಷರ ಚಪ್ಪರ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿ ಸಂಸ್ಥೆಯ ಅಧ್ಯಕ್ಷರಾದ ಮಧುಶ್ರೀ ಮತ್ತು ಜಂಟಿ ಕಾರ್ಯದರ್ಶಿ ಭವ್ಯ ರಾಮಚಂದ್ರ ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.