ಚೌಳೂರು: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2001-02ನೇ ಸಾಲಿನ 7ನೇ ತರಗತಿಯ ಹಳೆಯ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಶಿಕ್ಷಕರಿಗೆ ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಗೌರವ ಸಲ್ಲಿಸಿದರು.
ಚೌಳೂರಿನ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ 2001-02ನೇ ಸಾಲಿನ ವಿದ್ಯಾರ್ಥಿಗಳು ಭಾಗವಹಿಸಿ, ತಮಗೆ ವಿದ್ಯೆ ಕಲಿಸಿದ ಶಿಕ್ಷಕರನ್ನು ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಕ ಡಿ.ಟಿ. ಹನುಮಂತರಾಯ ಅವರು, ತಾವು ನೀಡಿದ ವಿದ್ಯೆಯಿಂದ ಅನೇಕ ವಿದ್ಯಾರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಉನ್ನತ ಸ್ಥಾನಕ್ಕೇರಿ ಉತ್ತಮ ಜೀವನ ರೂಪಿಸಿಕೊಂಡಿರುವುದನ್ನು ಕಂಡು ಸಂತಸವಾಗುತ್ತಿದೆ ಎಂದು ಹೇಳಿದರು.
ಹಲವು ವರ್ಷಗಳ ಬಳಿಕವೂ ತಮ್ಮನ್ನು ನೆನಪಿಸಿಕೊಂಡು ಗುರುವಂದನಾ ಕಾರ್ಯಕ್ರಮ ಆಯೋಜಿಸಿ ಸನ್ಮಾನಿಸಿದ 2001-02ನೇ ಸಾಲಿನ ವಿದ್ಯಾರ್ಥಿಗಳಿಗೆ ಅವರು ಧನ್ಯವಾದಗಳನ್ನು ಅರ್ಪಿಸಿದರು.
ಕಾರ್ಯಕ್ರಮದಲ್ಲಿ 2001-02ನೇ ಸಾಲಿನ 7ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ, ತಮ್ಮ ಶಿಕ್ಷಕರೊಂದಿಗೆ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.






About The Author
Discover more from JANADHWANI NEWS
Subscribe to get the latest posts sent to your email.