
ಪರಶುರಾಮಪುರ
ಸರ್ಕಾರಿ ನೌಕರರು ಸರ್ಕಾರದ ನಿರ್ದೇಶನದಂತೆ ಸಾರ್ವಜನಿಕರ ಕುಂದು ಕೊರತೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರೆ ಸಾರ್ವಜನಿಕರು ಮತ್ತು ಸರ್ಕಾರವೇ ಅಂತಹವರನ್ನು ಗೌರವಿಸುತ್ತದೆ ಎಂದು ಕೆಜಿಎಫ್‌ನ ಪೊಲೀಸ್ ಇನ್ಸ್ಪೆಕ್ಟರ್ (ಸಿಪಿಐ) ಮಂಜುನಾಥ ಅರ್ಜುನ ಲಿಂಗಾರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು
ಸಮೀಪದ ಚನ್ನಮ್ಮನಾಗತಿಹಳ್ಳಿ ಗ್ರಾಮದಲ್ಲಿ ಈಚೆಗೆ ಸ್ಥಳೀಯ ಆಡಳಿತ, ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ, ಎಸ್ ಎಸ್ ನಾರಾಯಣ, ವೈದೇಹಿ ಆಸ್ಪತ್ರೆ ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರ ಮತ್ತು ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳ ಬಂಗಾರದ ಪದಕ ಪುರಸ್ಕೃತರಾದ ಮಂಜುನಾಥ ಅರ್ಜುನ ಲಿಂಗಾರೆಡ್ಡಿ ಅವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಚಳ್ಳಕೆರೆ ತಾಲೂಕಿನ ಜನತೆಯಿಂದ ಗೌರವ ಸ್ವೀಕರಿಸಿ ಮಾತನಾಡಿದರು
ಚಳ್ಳಕೆರೆ ತಾಲೂಕು ಪರಶುರಾಮಪುರ ಸೇರಿದಂತೆ ನಗರ ವ್ಯಾಪ್ತಿಯಲ್ಲಿನ ಆರಕ್ಷಕ ಠಾಣೆಗಳಲ್ಲಿ ಈ ಹಿಂದೆ ನಾನು ಸಲ್ಲಿಸಿದ ಸೇವಾ ಅವಧಿಯಲ್ಲಿ ಕಳ್ಳತನದ ಪ್ರಕರಣಗಳೂ ಸೇರಿದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ತೋರಿದ ಭದ್ದತೆ ಮತ್ತು ಶ್ರದ್ದೆಗೆ ಮುಖ್ಯಮಂತ್ರಿಗಳ ಬಂಗಾರದ ಪದಕ ಗೌರವ ಸಭಿಸಿದೆ ಇದು ಈ ಭಾಗದ ಜನರಿಗೆ ಸಲ್ಲಬೇಕು ಎಂದರು
ಸಿಎನ್‌ಹಳ್ಳಿ ಗ್ರಾಪಂ ಅಧ್ಯಕ್ಷ ಬಿ ಆನಂದಕುಮಾರ ಅಧ್ಯಕ್ಷತೆ ವಹಿಸಿ ಮಾತನಾಡಿ ಆಂಧ್ರ ಗಡಿಯ ಪರಶುರಾಮಪುರ ಮತ್ತು ಚಳ್ಳಕೆರೆ ನಗರ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳ ತಡೆ ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ರೀತಿ ನೀತಿ ದೃಷ್ಟಿಯಲ್ಲಿಟ್ಟುಕೊಂಡು ಸರ್ಕಾರ ಗೌರವಿಸಿದೆ ಇಂದಿನ ಆಧುನಿಕ ಕಾಲಘಟ್ಟದಲ್ಲಿ ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಿದರೆ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಲಭ್ಯವಾಗುತ್ತದೆ ಎಂದರು
ಪಿಡಿಒ ಕರ‍್ಲಯ್ಯ ಮಾತನಾಡಿ ಈ ಭಾಗದ ಸಂಘ ಸಂಸ್ಥೆಗಳು ಜನರಿಗೆ ಆರೋಗ್ಯ ಸೇವೆ ನೀಡಲು ಮುಂದೆ ಬಂದು ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿ ಆರ್ಥಿಕವಾಗಿ ಹಿಂದುಳಿದವರಿಗೆ ನೆರವಾಗಿದೆ ಎಂದರು
ಇದೇ ವೇಳೆ ಪರಶುರಾಮಪುರ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳ ಜನರು ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ವೈದ್ಯಕೀಯ ಸೇವೆ ಪಡೆದುಕೊಂಡರು ಇದೇ ವೇಳೆ ಸಾರ್ವಜನಿಕ ಸಭೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ ಅರ್ಜುನ ಲಿಂಗಾರೆಡ್ಡಿ ಅವರನ್ನ ಸ್ಥಳೀಯ ಆಡಳಿತ ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಗೌರವಿಸಿದರು
ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಬಿ ಆನಂದಕುಮಾರ, ಗ್ರಾಮದ ಮುಖಂಡರಾದ ದಳಪತಿ ಭೀಮಣ್ಣ, ಗ್ರಾಪಂ ಮಾಜಿ ಅಧ್ಯಕ್ಷ ಬಿ ತಿಪ್ಪೇಸ್ವಾಮಿ, ಪೊಲೀಸ್ ಅಧಿಕಾರಿ ತಿರುಕಪ್ಪ, ವೀರಭದ್ರಪ್ಪ, ಡಾ ರಘುನಂದನ್, ಡಾ ಮಂಜುನಾಥ, ಡಾ ಲೋಕನಾಥ,ಎ ಚಲ್ಮೇಶ, ಕೆ ಸಿ ಮಹೇಶ, ಕರಿಯಣ್ಣ, ಮಂಜುನಾಥ, ಸ್ವಾಮಿ ವಿವೇಕಾನಂದ ಸೇವಾ ಸಂಘದ ಪದಾಧಿಕಾರಿಗಳು ಸ್ಥಳೀಯ ಗ್ರಾಪಂ ಸದಸ್ಯರು ಗ್ರಾಮಸ್ಥರು ಇದ್ದರು
About The Author
Discover more from JANADHWANI NEWS
Subscribe to get the latest posts sent to your email.