ಹಿರಿಯೂರು: ಹಿರಿಯೂರು ತಾಲೂಕು ಬರಪೀಡಿತ ಪ್ರದೇಶವೆಂದು ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ರೈತರ ಜಾನುವಾರುಗಳಿಗೆ ಮೇವು ಒದಗಿಸುವುದು ಅತ್ಯಂತ ಅಗತ್ಯವಾಗಿದೆ. ಆದರೆ ಯಲ್ಲದ ಕೆರೆ ಪಶು ಆಸ್ಪತ್ರೆಯ ವ್ಯಾಪ್ತಿಗೆ ಬರುವ 26 ಹಳ್ಳಿಗಳ ರೈತರಿಗೆ ಕೇವಲ 200 ಪಾಕೆಟ್ ಮೇವಿನ ಬೀಜಗಳನ್ನು ಉಚಿತವಾಗಿ ವಿತರಿಸಲಾಗಿದೆ. ಈ ಭಾಗದ ರೈತರಿಗೆ ಸಮರ್ಪಕವಾಗಿ ವಿತರಿಸಲು ಕನಿಷ್ಠ 1,000 ಪಾಕೆಟ್ ಮೇವಿನ ಬೀಜಗಳ ಅಗತ್ಯವಿತ್ತು.
ಯಲ್ಲದ ಕೆರೆ ಪಶು ಆಸ್ಪತ್ರೆಯ ವ್ಯಾಪ್ತಿಯ 26 ಹಳ್ಳಿಗಳಲ್ಲಿ ಸುಮಾರು 2,600 ರಾಸುಗಳಿದ್ದು, ಅಗತ್ಯಕ್ಕೆ ತಕ್ಕಷ್ಟು ಮೇವಿನ ಬೀಜ ವಿತರಣೆ ಮಾಡದಿರುವುದರಿಂದ ರೈತರಿಗೆ ತೊಂದರೆಯಾಗಿದೆ. ರೈತರಿಗೆ ಸಮರ್ಪಕವಾಗಿ ಮೇವಿನ ಬೀಜ ತಲುಪಿಸುವಲ್ಲಿ ಪಶು ಇಲಾಖೆ ಹೆಚ್ಚಿನ ಗಮನ ಹರಿಸಬೇಕಾಗಿದೆ.
ಬರದ ಪರಿಸ್ಥಿತಿಯಿಂದ ರೈತರು ಈಗಾಗಲೇ ಸಂಕಷ್ಟದಲ್ಲಿದ್ದು, ಜಾನುವಾರುಗಳಿಗೆ ಮೇವು ಒದಗಿಸುವುದು ಕಷ್ಟಕರವಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು, ಅಗತ್ಯ ಪ್ರಮಾಣದಲ್ಲಿ ಮೇವಿನ ಬೀಜಗಳನ್ನು ವಿತರಿಸಬೇಕು. ಜೊತೆಗೆ ಹಿರಿಯೂರು ತಾಲೂಕಿನಲ್ಲಿ ಜಾನುವಾರುಗಳ ಮೇವಿನ ಸಮಸ್ಯೆಗೆ ಪರಿಹಾರ ಕಲ್ಪಿಸಲು ತಕ್ಷಣ ಮೇವಿನ ಬ್ಯಾಂಕ್ ಆರಂಭಿಸಬೇಕು ಎಂದು ಕೆ.ಕೆ. ಹಟ್ಟಿಯ ಜಯಪ್ರಕಾಶ್ ಭಾರತೀಯ ಕಿಸಾನ್ ಸಂಘದ ಕಾರ್ಯದರ್ಶಿಗಳು ಅವರು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಪಶು ಆಸ್ಪತ್ರೆಯ ಸಿಬ್ಬಂದಿ ಹಾಗೂ ಮಂಜುನಾಥ್ ಬಿ.ಕೆ., ರೇವಣ್ಣ, ಕುಚಲ್ ಕುಮಾರ್, ಜೆ. ಬೈರಪ್ಪ, ಚಿಗಲಿ ಕಟ್ಟೆ ರಂಗನಾಥ್, ನರೇಂದ್ರ ಸೇರಿದಂತೆ ರೈತರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.